Monday, January 26, 2026

**ಅಮಿತ್ ಷಾ ಅವರನ್ನು ಬೇಟಿ ಮಾಡಿದ ಸಂಸದ , ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್* 

ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಇವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ರವರನ್ನು ಭೇಟಿ ಮಾಡಿ ಇತ್ತೀಚೆಗೆ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಇವರ ಪ್ರಕರಣವನ್ನು ಎನ್ ಐ ಎ ವಹಿಸಿಕೊಂಡಿರುವುದಕ್ಕೆ ಧನ್ಯವಾದ ಸಮರ್ಪಿಸಿ, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರು ರಾಜ್ಯದಲ್ಲಿ ಎನ್ ಐ ಎ ಯನ್ನು ಬಲಗೊಳಿಸುವುದರೊಂದಿಗೆ ಎನ್ ಐ ಎ ಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಸಂದೇಶವನ್ನು ನೀಡಲಾಗುವುದು ಮತ್ತು ಎನ್ ಐ ಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...