Thursday, February 13, 2025

ದ.ಕ ಜಿಲ್ಲೆಯ 19 ಮಂದಿ ವಿರುದ್ದ ಗಡಿಪಾರು ಆದೇಶ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 19 ಮಂದಿ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಮೂಡುಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್., ಬಜ್ಪೆ ಶಾಂತಿಗುಡ್ಡದ ಸಫ್ವಾನ್, ಬೋಂದೆಲ್‌ನ ಜಯೇಶ್ ಯಾನೆ ಸಾಚು, ನೀರುಮಾರ್ಗದ ಭಟ್ರಕೋಡಿಯ ವರುಣ್ ಪೂಜಾರಿ, ಅಶೋಕ ನಗರದ ಅಝೀಝ್, ಕಾವೂರಿನ ಇಶಾಮ್, ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ, ಕೈಕಂಬ-ಗಣೇಶ್‌ಪುರದ ದೀಕ್ಷಿತ್ ಪೂಜಾರಿ, ಕೃಷ್ಣಾಪುರದ ಲಕ್ಷ್ಮೀಶ ಉಳ್ಳಾಲ, ಬೊಂಡಂತಿಲದ ಕಿಶೋರ್ ಸನಿಲ್, ಉಳ್ಳಾಲ ಕೋಡಿಯ ಹಸೈನಾರ್ ಅಲಿ, ಕುದ್ರೋಳಿ ಕರ್ಬಲಾ ರಸ್ತೆಯ ಅಬ್ದುಲ್ ಜಲೀಲ್, ಬೋಳೂರಿನ ರೋಶನ್ ಕಿಣಿ, ಕಸಬಾ ಬೆಂಗರೆಯ ಅಹ್ಮದ್ ಸಿನಾನ್, ಜಪ್ಪಿನಮೊಗರಿನ ದಿತೇಶ್ ಕುಮಾರ್, ಬಜಾಲ್ ಕುತ್ತಡ್ಕದ ಗುರುಪ್ರಸಾದ್, ಭರತ್ ಪೂಜಾರಿ, ಜಪ್ಪು ಕುಡ್ಪಾಡಿಯ ಸಂದೀಪ್ ಶೆಟ್ಟಿ ವಿರುದ್ದ ಗಡಿಪಾರು ಆದೇಶ ಹೊರಡಿಸಲಾಗಿದೆ.

ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಶಾಂತಿಯುತ ಚುನಾವಣೆ ನಡೆಸುವ ಸಲುವಾಗಿ ಈ ಕ್ರಮ ಜರಗಿಸಲಾಗಿದೆ.

ಕಳೆದ ಎರಡು ದಿನಗಳಲ್ಲಿ 19 ರೌಡಿ ಶೀಟರ್‌ಗಳ ವಿರುದ್ಧ ಗಡಿಪಾರು ಆದೇಶ ಮಾಡಲಾಗಿದ್ದರೆ, ಈ ತಿಂಗಳ ಆರಂಭದಲ್ಲಿ 7 ಜನರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆರೋಪಿಗಳನ್ನು ವಿವಿಧ ಜಿಲ್ಲೆಗಳಿಗೆ ಸ್ಥಳಾಂತರಿಸಲಾಗಿದೆ. ಶಾಂತಿಯುತ ಚುನಾವಣೆಯನ್ನು ನಡೆಸುವ ಸಲುವಾಗಿ ಇವರ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇರಿಸಲಾಗಿದೆ. ಅದಲ್ಲದೆ 367 ಮಂದಿಯ ವಿರುದ್ಧ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...