ವಿಟ್ಲ: ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪಡೆದುಕೊಂಡ ಪುಣಚ ಗ್ರಾಮದ ದಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಜಿಲ್ಲಾಡಳಿತ ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಮಾರಂಭದಲ್ಲಿ ನಮ್ಮ ಶಾಲೆಯಿಂದ ಮುಖ್ಯ ಶಿಕ್ಷಕರಾದ ಲಕ್ಷ್ಮೀ . ಪಿ ಅತಿಥಿ ಶಿಕ್ಷಕರಾದ ಅಜಯ್ ಕುಮಾರ್ ಪಿ. ಗೌರವ ಶಿಕ್ಷಕಿ ಕುಮಾರಿ ಧನ್ಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಕೃಷ್ಣ ಪದವು ಅಡುಗೆ ಸಿಬ್ಬಂದಿ ವಿಜಯಲಕ್ಷ್ಮಿ ಶಾಲಾ ವಿದ್ಯಾರ್ಥಿ ನಾಯಕಿಯಾದ ದಿವ್ಯಶ್ರೀ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 2017-18 ಸಾಲಿನಲಿನಿದೇ ಶಾಲೆ ಹಳದಿ ಶಾಲೆ ಪ್ರಶಸ್ತಿ, 2018-19 ಸಾಲಿನಲ್ಲಿ ಹಸಿರು ಶಾಲೆ ಪ್ರಶಸ್ತಿ ಪಡೆದುಕೊಂಡಿತ್ತು.

