ಧರ್ಮಸ್ಥಳ: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಶ್ ಮಂಜುನಾಥನ ದರ್ಶನ ಪಡೆದರು. ಸುಮಲತಾ ಅಂಬರೀಶ್ ಜೊತೆಗೆ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಆಗಮಿಸಿದ್ದರು.
ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದಿರುವ ಸುಮಲತಾ ಅವರ ಜೊತೆಗೆ ನಟ ದೊಡ್ಡಣ್ಣ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಾಥ್ ನೀಡಿದ್ದಾರೆ.