Monday, January 26, 2026

ಮೈಸೂರು ಅರಮನೆ ಆವರಣದಲ್ಲಿ ಜಂಬೂ ಸವಾರಿ ಸಂಭ್ರಮ

ಮೈಸೂರು: ಐತಿಹಾಸಿಕ ಜಂಬೂ ಸವಾರಿಗೆ ಮೈಸೂರು ಸಜ್ಜಾಗಿದೆ. ಇಂದು ಮಧ್ಯಾಹ್ನ 2.36 ರಿಂದ 2.50ರ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಲಿದ್ದು ಜಂಬೂ ಸವಾರಿ ಮರೆವಣಿಗೆಗೆ ಚಾಲನೆ ನೀಡಲಿದ್ದಾರೆ.

ಸಂಜೆ 5.07ರಿಂದ 5.18ರವರೆಗೆ ಮಕರ ಲಗ್ನ ಮುಹೂರ್ತದಲ್ಲಿ 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿ ದೇವಿಯನ್ನ ಹೊತ್ತು ಆನೆ ಅಭಿಮನ್ಯು ಸಾಗಲಿದ್ದು, ಬಳಿಕ ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವ ಎಸ್ ಟಿ ಸೋಮಶೇಖರ್, ಮೇಯರ್ ಶಿವಕುಮಾರ್ ಸೇರಿ ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಡಾ ಚಂದ್ರಗುಪ್ತ ಭಾಗಿಯಾಗಲಿದ್ದಾರೆ.

ಇನ್ನು ಮತ್ತೊಂದು ಕಡೆ ವಿಶ್ವವಿಖ್ಯಾತ ಜಂಬೂಸವಾರಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಿವಿಧ ಜಿಲ್ಲೆಗಳಿಂದ ಗರುಡ ಪಡೆ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ​​ ಮೈಸೂರಿಗೆ ಆಗಮಿಸಿದ್ದು, ಜಂಬೂಸವಾರಿ ಸಾಗುವ ಮಾರ್ಗದುದ್ದಕ್ಕೂ ಪರಿಶೀಲನೆ ನಡೆಸಲಾಗಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...