ಮಂಗಳೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.


ದ.ಕ ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ ಕುಮಾರ್ ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ವರ್ಗಾಯಿಸಲಾಗಿದೆ.
ಇನ್ನು ಡಾ.ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಪಾಲಿಗೆ ನಿಷ್ಠಾವಂತ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಜನರ ಪ್ರೀತಿ ವಿಶ್ವಾಸಗಳಿಸಿದ್ದರು.












