Friday, July 11, 2025

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಅ.18.(ಕ.ವಾ):- ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಹಬದಿಗೆ ಬಂದಿದೆ, ಆದರೆ, ಸಂಪೂರ್ಣವಾಗಿ ಹೋಗಿಲ್ಲ. ಈ ಅಂಶವನ್ನು ಪರಿಗಣನೆಗೆ ತೆಗೆದುಕೊಂಡು ಮುಂಬರುವ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವವನ್ನು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನೊಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಅ.18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನವೆಂಬರ್ 1ರ ಕನ್ನಡ ರಾಜ್ಯೋತ್ಸವ ನಿಮಿತ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು.
ಈ ಸಂದರ್ಭದಲ್ಲಿ ನಾಡಗೀತೆ ಹಾಗೂ ರೈತ ಗೀತೆಯನ್ನು ಹಾಡುವ ಶಿಕ್ಷಕ ವೃಂದ ಉತ್ತಮವಾಗಿ ತಾಲೀಮು ನಡೆಸಿರಬೇಕು, ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಜವಬ್ದಾರಿ ವಹಿಸಬೇಕು, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಕ್ರೀಡಾಂಗಣವನ್ನು ಸ್ವಚ್ಛ ಪಡಿಸುವ ಹಾಗೂ ಸಮತಟ್ಟು ಮಾಡುವ ಕೆಲಸವಾಗಬೇಕು, ಮಳೆಬರುವ ಸಾಧ್ಯತೆಗಳಿರುವುದರಿಂದ, ಗಣ್ಯರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮಳೆಗೆ ಸಿಲುಕದಂತೆ ಉತ್ತಮ ಪೆಂಡಾಲ್‍ಗಳನ್ನು ಹಾಕಬೇಕು, ಅದರೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ನಿರ್ವಹಿಸಬೇಕಾದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಮಾಡುವ ಬಗ್ಗೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಅವರು ನಿರ್ದೇಶನ ನೀಡಿದರು.
ಡಿಸಿಪಿ ಹರಿರಾಮ್ ಶಂಕರ್, ಪೆÇ್ರಬೆಷನರಿ ಐಎಎಸ್ ಅಧಿಕಾರಿ ಅಕ್ರಮ್ ಶಾ, ಅಪರ ಜಿಲ್ಲಾಧಿಕಾರಿ ಮಾಣಿಕ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...