Saturday, June 28, 2025

ಮಂಗಳೂರು: ಜು. 3ರಿಂದ 5ರ ತನಕ ದ.ಕ. ಡಿಸಿ ಕಚೇರಿ ಬಂದ್

ಮಂಗಳೂರು:  ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ಮಾಡಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ಮತ್ತಷ್ಟು ಹರಡದಂತೆ ಜಿಲ್ಲಾಡಳಿತ ಆರೋಗ್ಯ ಇಲಾಖೆ ಹತ್ತು ಹಲವು ರೀತಿಯಲ್ಲಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರು, ಸಚಿವರ ಕಚೇರಿ ಸೇರಿದಂತೆ ಸಂಪೂರ್ಣ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಬಂದ್ ಮಾಡಿ ಆದೇಶ ನೀಡಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ಕಡ್ಡಾಯ ನಿರ್ಬಂಧ ಹೇರಲಾಗಿದೆ. ಯಾವುದೇ ಕಾರಣಕ್ಕೂ ಜುಲೈ 3ರಿಂದ 5ರ ತನಕ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ತೆರಳುವಂತಿಲ್ಲ. ಇನ್ನು ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯನ್ನು ಬಂದ್ ಮಾಡಲಾಗಿದೆ. ಒಂದು ವಾರಗಳ ಕಾಲ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಇದೀಗ ಡಿಸಿ ಕಚೇರಿಯನ್ನು ಕೂಡ ಬಂದ್ ಮಾಡಲಾಗಿದೆ.

More from the blog

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...