Friday, June 27, 2025

ಡಿ.ಸಿ.ಸಿ.ಬ್ಯಾಂಕ್ ನ ಎ.ಟಿ.ಎಂ.ಉದ್ಘಾಟನೆ

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬಿ.ಸಿ.ರೋಡು ಶಾಖಾ ಕಟ್ಟಡದ ನೆಲ ಅಂತಸ್ತಿನಲ್ಲಿ ಅನುಷ್ಠಾನಗೊಳಿಸಿದ ಬ್ಯಾಂಕಿನ ನೂತನ ಎಟಿಎಂ ಸೆ. ೨೦ರಂದು ಉದ್ಘಾಟನೆಗೊಂಡಿತು.

ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಎಟಿಎಂ ಉದ್ಘಾಟಿಸಿ ಮಾತನಾಡಿ, ನಮ್ಮ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇAದ್ರಕುಮಾರ್ ಅವರ ವಿಶೇಷ ಮುತುವರ್ಜಿಯಿಂದ ಅನುಷ್ಠಾನಗೊಂಡ ಈ ಎಟಿಎಂ ಸರ್ವರ ಆರ್ಥಿಕ ವ್ಯವಹಾರಗಳಿಗೆ ನೆರವಾಗಲಿದೆ. ಬ್ಯಾಂಕಿನ ಗ್ರಾಹಕರ ಪ್ರೋತ್ಸಾಹದ ಪರಿಣಾಮದಿಂದ ಬ್ಯಾಂಕ್ ಈ ಮಟ್ಟಕ್ಕೆ ಪ್ರಗತಿ ಹೊಂದಿದೆ ಎಂದರು.

 

ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದರು. ಬ್ಯಾಂಕಿನ ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ಶಶಿಕುಮಾರ್ ರೈ ಬಿ, ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಮುಖ್ಯಕಾರ್ಯನಿರ್ವಹಣಾಽಕಾರಿ ರವೀಂದ್ರ ಬಿ, ಜಿಎಂ ಗೋಪಿನಾಥ್ ಭಟ್, ಭೂ ಅಭಿವೃದ್ಧಿ ಬ್ಯಾಂಕ್ ರಾಜ್ಯ ನಿರ್ದೇಶಕ ರಾಜಶೇಖರ ಜೈನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಸಹಕಾರಿ ಇಲಾಖೆಯ ಗೋಪಾಲ ಗೌಡ, ಬಿ.ಸಿ.ರೋಡು ಶಾಖಾ ವ್ಯವಸ್ಥಾಪಕಿ ಸೌಮ್ಯ, ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಸಿಇಒ ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭೇಟಿ ನೀಡಿದರು. ಅಮ್ಟಾಡಿ ಸಿಎ ಬ್ಯಾಂಕ್ ಸಿಬಂದಿ ದಿನೇಶ್ ಅಮೀನ್ ಕಾರ್ಯಕ್ರಮ ನಿರ್ವಹಿಸಿದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...