Friday, January 30, 2026

ಯುವತಿಯನ್ನು ಕೊಲೆ ಮಾಡಿ ತುಂಬೆ ನದಿ ತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು

ಬಂಟ್ವಾಳ: ಯುವತಿಯನ್ನು ತುಂಬೆ ನದಿತೀರದಲ್ಲಿ ಕೊಲೆಗೈದು ಬಿಸಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಮೃತ ಯುವತಿ ಎಂದು ಗುರುತಿಸಲಾಗಿದೆ.
ಮೃತ ಯುವತಿ ಭೂ ವ್ಯವಹಾರ ವಹಿವಾಟು ನಡೆಸುತ್ತಿದ್ದು, ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಮುಲ್ಕಿ ಪರಿಸರದಲ್ಲಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಈಕೆ ಮನೆಗೆ ರಿಕ್ಷಾದಲ್ಲಿ ಬಂದು ಹೋಗುತ್ತಿದ್ದರು ಎಂದು ನಿಕಟವರ್ತಿಗಳು ತಿಳಿಸಿದ್ದಾರೆ.
ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದು, ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದು ಎಂದು ಶಂಕಿಸಲಾಗಿದೆ.
ಮೃತ ಆಶಾ ಮುಲ್ಕಿಯ ಒಡೆಯರ ಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದು, ಆಕೆಯ ಮನೆಯವರು ಮೃತ ಶರೀರ ಪತ್ತೆಯಾದ ಸ್ಥಳ ಬಂಟ್ವಾಳದ ತುಂಬೆಗೆ ಬಂದಿದ್ದಾರೆ.

More from the blog

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...