Friday, June 27, 2025

ನಗ್ರಿ ಕಾರಿನಲ್ಲಿ ಶವ ಪತ್ತೆ: ಕೊಲೆ ಶಂಕೆ

ಬಂಟ್ವಾಳ: ವ್ಯಕ್ತಿಯೋರ್ವನನ್ನು ಕೊಲೆ ನಡೆಸಿ ಕಾರಿನಲ್ಲಿ ಮೃತದೇಹವನ್ನು ಬಿಟ್ಟು ಹೋದ ಘಟನೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ನಗ್ರಿ ಶಾಂತಿ ನಗರದಲ್ಲಿ ನಡೆದಿದೆ.
ಮಂಚಿ ಸಮೀಪದ ನಗ್ರಿ ಶಾಂತಿನಗರ ಎಂಬಲ್ಲಿ ನಿಲ್ಲಿಸಲಾದ ಬೆಂಗಳೂರು ಮೂಲದ ಇನ್ನೋವಾ ಕಾರೊಂದರಲ್ಲಿ ಅನಾಥ ಶವವೊಂದು ಪತ್ತೆಯಾಗಿದ್ದು, ಕೊಲೆ ಎಂಬ ಶಂಕೆಯನ್ನು ಪೋಲೀಸರು ವ್ಯಕ್ತಪಡಿಸಿದ್ದಾರೆ.


ಕೊಲೆಗಡುಕರು ಕೊಲೆ ನಡೆಸಿ ಬಳಿಕ ಕಾರಿನಲ್ಲಿ ಶವವನ್ನು ಬಿಟ್ಟು ಪರಾರಿಯಾಗಿರಬೇಕು ಎಂದು ಶಂಕಿಸಲಾಗಿದೆ.
ಕಾರಿನಲ್ಲಿ ರಕ್ತಸಿಕ್ತ ವಾದ ರೀತಿಯಲ್ಲಿ ಸುಮಾರು 40 ವರ್ಷ ಪ್ರಾಯದ ವ್ಯಕ್ತಿಯ ಶವ ಕುಳಿತ ಸ್ಥಿತಿಯಲ್ಲಿ ಇದೆ.
ಕುತ್ತಿಗೆಗೆ ಹಗ್ಗ ಬಿಗಿದು ಬಳಿಕ ಚೂರಿ ಹಾಕಲಾಗಿದೆ ಎಂದು ಶಂಕಿಸಲಾಗಿದೆ.

ಶಾಂತಿನಗರ ರಸ್ತೆಯ ಬದಿಯಲ್ಲಿ ಇರುವ ಮೈದಾನದ ರೀತಿಯ ಗುಡ್ಡದಲ್ಲಿ ಕಾರನ್ನು ನಿಲ್ಲಿಸಲಾಗಿದ್ದು,  ಹಿಂಬದಿ ಸೀಟಿನಲ್ಲಿ ಶವ ಇದೆ.
ಬೆಳಿಗ್ಗೆ ಸುಮಾರು 8 ಗಂಟೆಯವರೆಗೆ ಯಾವುದೇ ಕಾರು ಇಲ್ಲಿ ಇರಲಿಲ್ಲ. ಆ ಬಳಿಕ ಕಾರು ಬಂದಿರಬೇಕು ಎಂದು ಹೇಳಲಾಗುತ್ತಿದೆ. ಕಾಸರಗೋಡು ಮೂಲದ ವ್ಯಕ್ತಿಯಾಗಿರಬೇಕು  ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್, ನಗರ ಠಾಣಾ ಎಸ್. ಐ.ಅವಿನಾಶ್, ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ಭೇಟಿ  ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...