Saturday, July 12, 2025

ತೆಂಕುತಿಟ್ಟಿನ ಪ್ರಸಿದ್ಧ ಭಾಗವತ ಪದ್ಯಾಣ ಗಣಪತಿ ಭಟ್‌ ನಿಧನ

ಮಂಗಳೂರು: ಖ್ಯಾತ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್‌ (66) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಇಂದು ಬೆಳಗ್ಗೆ 7.30 ಕ್ಕೆ ಹೃದಯಘಾತವಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷರಂಗದಲ್ಲಿ ಭಾಗವತರಾಗಿ ಮಿಂಚುತ್ತಿರುವ ಪದ್ಯಾಣ ಗಣಪತಿ ಭಟ್ಟರು ವೃತ್ತಿಪರ ಭಾಗವತರಾಗಿ ತೆಂಕಿನಲ್ಲಿ ಪದ್ಯಾಣ ಶೈಲಿಯನ್ನೇ ಹುಟ್ಟು ಹಾಕಿದ ಮೇರು ಕಲಾವಿದರಾಗಿದ್ದರು.

ಪದ್ಯಾಣ ತಿರುಮಲೇಶ್ವರ ಭಟ್ಟ ಮತ್ತು ಸಾವಿತ್ರಿ ದಂಪತಿಯ ಮೂರನೇ ಮಗನಾಗಿ 1955ರಲ್ಲಿ ಜನನಿದ್ದ ಗಣಪತಿ ಭಟ್ ಆ ಕಾಲದಲ್ಲಿ ಭಾಗವತಿಕೆಗೆ ಹೆಸರಾಗಿದ್ದ ಅಜ್ಜ ಪುಟ್ಟು ನಾರಾಯಣ ಭಟ್ಟರಿಂದಲೇ ಭಾಗವತಿಕೆಯ ಪ್ರಾಥಮಿಕ ಪಾಠ ಅಭ್ಯಾಸಿಸಿದ್ದರು. ಅಜ್ಜನ ಶಿಷ್ಯರಾಗಿದ್ದ ಮಾಂಬಾಡಿ ನಾರಾಯಣ ಭಾಗವತರಲ್ಲಿ ಮುಂದಿನ ಅಭ್ಯಾಸ ಮಾಡಿದ್ದರು. ಎರಡು ವರ್ಷಗಳಲ್ಲೇ ಭಾಗವತಿಕೆಯ ಸೂಕ್ಷ್ಮಪಾಠ, ತಾಳಗತಿ ಹಾಗೂ ಪಟ್ಟುಗಳಲ್ಲಿ ಪರಿಣತಿಯತ್ತ ಸಾಗಿದ ಗಣಪತಿ ಭಟ್ಟರು 1971ರಲ್ಲಿ ಅಂದರೆ, ತಮ್ಮ 16ರ ಹರೆಯದಲ್ಲೇ ಚೌಡೇಶ್ವರೀ ಮೇಳದಲ್ಲಿ ಸಂಗೀತಗಾರರಾಗಿ ಸೇರಿ ಮುಂದಿನ ವರ್ಷ ಕುಂಡಾವು ಮೇಳ ಪ್ರವೇಶಿಸಿ ಅಲ್ಲಿ 2 ವರ್ಷ ಸೇವೆ ಸಲ್ಲಿಸಿದರು. ಮುಂದೆ ಕಸ್ತೂರಿ ವರದರಾಯ ಪೈ ಯಾಜಮಾನ್ಯದ ಸುರತ್ಕಲ್‌ ಮೇಳ ಸೇರಿದ ಪದ್ಯಾಣ ತನ್ನ ವ್ಯವಸಾಯ ಜೀವನದುದ್ದಕ್ಕೂ ಸಿದ್ಧಿ- ಪ್ರಸಿದ್ಧಿ ಸಹಿತ ಅಪಾರ ಯಶಸ್ಸು ಪಡೆದಿದ್ದರು.

40 ವರ್ಷಗಳ ಸುದೀರ್ಘ ಕಾಲ ಭಾಗವತರಾಗಿ ಕುಂಡಾವು, ಚೌಡೇಶ್ವರೀ, ಸುರತ್ಕಲ್‌, ಮಂಗಳಾದೇವಿ, ಕರ್ನಾಟಕ, ಎಡನೀರು, ಹೊಸನಗರ ಮೇಳದಲ್ಲಿ ತಮ್ಮ ಸೇವೆ ಸಲ್ಲಿಸಿದ್ದರು.

 

ಪ್ರಶಸ್ತಿಗಳು: ದ. ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಈಟಿವಿಯ “ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ ಮೊದಲ ಯಕ್ಷಗಾನ ಭಾಗವತರಾಗಿದ್ದರು . ಇದಲ್ಲದೆ ಹಲವಾರು ಸ೦ಘ-ಸ೦ಸ್ಥೆಗಳಿ೦ದ ಸನ್ಮಾನ ಮಾಡಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...