Friday, June 27, 2025

ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

ಬಂಟ್ವಾಳ: ಮರ ಕಡಿಯುವಾಗ ಆಕಸ್ಮಿಕವಾಗಿ ಮೈಮೇಲೆ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಪೆರ್ಲಾಪು ನಿವಾಸಿ ಸುರೇಶ್ (38) ಮೃತಪಟ್ಟ ವ್ಯಕ್ತಿ.

ಸುರೇಶ್ ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕ ವಾಗಿ ಸುರೇಶ್ ಅವರ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದರು.ಕೂಡಲೇ

ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...