Monday, January 26, 2026

ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸರಪಾಡಿ ಗ್ರಾಮದ SEZ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹದ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತಿಯಾಗಿದ್ದು, ಚೂಡಿದಾರ್, ಪ್ಯಾಂಟ್ ಧರಿಸಿದ ಮಹಿಳೆಯ ಅಥವಾ ಯುವತಿ ಎಂಬುದು ಸರಿಯಾಗಿ ತಿಳಿಯಲು ಸಾಧ್ಯವಾಗುತ್ತಿಲ್ಲ, ಆದರೆ ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ  ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಸಧ್ಯ ಇದೀಗ ಯುವತಿ ಅಥವಾ ಮಹಿಳೆಯ ಶವ ಪತ್ತೆಯಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ಪೋಲಿಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ,  ಶವದ ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...