Friday, June 27, 2025

ಉಮರ್ ಫಾರೂಕ್ ಹೃದಯಾಘಾತದಿಂದ ಮೃತ

ಬಂಟ್ವಾಳ, ಆ. ೫: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ಬೋಳಂತೂರಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.
ತಾಲೂಕಿನ ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ, ಅದ್ರಾಮ ಬ್ಯಾರಿ ಎಂಬವರ ಪುತ್ರ ಉಮರ್ ಫಾರೂಕ್ (೩೫) ಮೃತಪಟ್ಟವರು. ಫಾರೂಕ್ ಅವರು ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಶಿವಾಜಿನಗರದ ಕಮರ್ಶಿಯಲ್ ಸ್ಟ್ರೀಟ್‌ನಲ್ಲಿ ದುಡಿಯುತ್ತಿದ್ದರು. ಇಂದು ಮಧ್ಯಾಹ್ನ ೨.೩೦ಗಂಟೆ ಸುಮಾರಿಗೆ ತನ್ನ ಸ್ನೇಹಿತನೊಂದಿಗೆ ಮಾತನಾಡಿದ್ದು, ಇಲ್ಲಿ ಮಳೆಯಿರುವ ಕಾರಣ ನಾಳೆ ಊರಿಗೆ ಬರುವುದಾಗಿ ತಿಳಿಸಿದ್ದರು. ಬಳಿಕ ಮಧ್ಯಾಹ್ನ ೩ ಗಂಟೆ ಸುಮಾರಿಗೆ ಮೃತಪಟ್ಟ ಬಗ್ಗೆ ಮಾಹಿತಿ ಲಭಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...