Tuesday, January 27, 2026

ಹೊನ್ನಾಳ ಖದೀಮಿ ಜಾಮಿಯಾ ಮಸೀದಿಯಲ್ಲಿ ಮುಅಝ್ಝಿನ್ ಆಗಿ ಸೇವೆ ಸಲ್ಲಿಸಿದ್ದ ಹಸನ್ ಸಾಹೇಬ್ ನಿಧನ

ಮಂಗಳೂರು : ಕುಂದಾಪುರ ತಾಲೂಕು ಹೊನ್ನಾಳ ನಿವಾಸಿ ಹಸನ್ ಸಾಹೇಬ್ (68) ಶನಿವಾರ ಮದ್ಯರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಅವರು ಹೊನ್ನಾಳ ಖದೀಮಿ ಜಾಮಿಯಾ ಮಸೀದಿಯಲ್ಲಿ 35 ವರ್ಷಗಳ ಕಾಲ ಮುಅಝ್ಝಿನ್ ಆಗಿ ಸೇವೆ ಸಲ್ಲಿಸಿದ್ದರು. ಮೃತರು ಆಲ್ ಇಂಡಿಯ ಮುಸ್ಲಿಂ ಡೆವಲಪ್ ಮೆಂಟ್ ಫೋರಂ ನ ರಾಷ್ಟ್ರಾದ್ಯಕ್ಷ ಶಕೀಲ್ ಹಸನ್ ಎಚ್ ಸಹಿತ ಇಬ್ಬರು ಪುತ್ರರು, ನಾಲ್ವರು ಪುತ್ರಿಯರ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸಂತಾಪ
ಹಸನ್ ಸಾಹೇಬ್ ಅವರ ನಿಧನಕ್ಕೆ ಆಲ್ ಇಂಡಿಯ ಮುಸ್ಲಿಂ ಡೆವಲಪ್ ಮೆಂಟ್ ಫೋರಂ ನ ರಾಷ್ಟ್ರೀಯ ವಕ್ತಾರ ಶೇಖ್ ಮುಝಪ್ಪರ್, ರಾಜ್ಯಾದ್ಯಕ್ಷ ನಸೀರ್ ಅಹಮದ್ ಚಿಕ್ಕಮಗಳೂರು, ಉಪಾದ್ಯಕ್ಷ ಎಸ್.ಅಬೂಬಕ್ಕರ್ ಸಜಿಪ, ಪ್ರದಾನ ಕಾರ್ಯದರ್ಶಿ ಷಾ ನವಾಝ್ ಮುಲ್ಲಾ ಬೆಳಗಾಂ, ದ.ಕ.ಜಿಲ್ಲಾದ್ಯಕ್ಷ ಆಸಿಫ್ ಚೊಕ್ಕಬೆಟ್ಟು, ಬಂಟ್ವಾಳ ತಾಲೂಕು ಅದ್ಯಕ್ಷ ಹಾಸಿರ್ ಪೆರಿಮಾರ್, ಹೊನ್ನಾಳ ಖದೀಮಿ ಜಾಮಿಯಾ ಮಸೀದಿಯ ಅದ್ಯಕ್ಷ ಇಮಾಂ ಸಾಹೇಬ್ ಟಂಕಸಾಲಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಖಾದಿರ್ ಬಾಷಾ ಸಂತಾಪ ವ್ಯಕ್ತಪಡಿಸಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...