ಬೆಂಗಳೂರು: ಕೊರೊನಾ ವೈರಸ್ ನಿಂದ ಬಳಲುತ್ತಿದ್ದ ಬಸವ ಕಲ್ಯಾಣ ಶಾಸಕ ನಾರಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕೊರೊನಾ ಸೋಂಕಿನ ಹಿನ್ನೆಲೆ ನಾರಾಯಣರಾವ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಕೊರೋನಾ ಸೋಂಕಿನ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಶಾಸಕ ನಾರಾಯಣರಾವ್ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿದ್ದು, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


