Thursday, January 29, 2026

ತೆಂಕುತಿಟ್ಟು ಯಕ್ಷಗಾನ ಭಾಗವತ ರಮೇಶ್ ಆಚಾರ್ಯ ಇನ್ನಿಲ್ಲ

ಬಂಟ್ವಾಳ: ಕಡೇಶಿವಾಲಯ ಗ್ರಾಮದ ಖಂಡಿಗ ನಿವಾಸಿ ಹಿರಿಯ ತೆಂಕುತಿಟ್ಟು ಯಕ್ಷಗಾನ ಭಾಗವತ ರಮೇಶ್ ಆಚಾರ್ಯ (79) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜೂನ್ 4 ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಮೂವರು ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ದಿ.ಕೆ.ಸುಬ್ರಾಯ ಆಚಾರ್ಯ ಸತ್ಯಮ್ಮ ದಂಪತಿಗಳ ಪುತ್ರರಾಗಿ‌ 8 ನೇ ತರಗತಿ ವರೆಗೆ ವಿದ್ಯಾಭ್ಯಾಸ ಮಾಡಿದ ಅವರು ಯಕ್ಷಗಾನ ಕ್ಷೇತ್ರದ ಕಡೆ ಗೆ ಆಕರ್ಷಿತರಾದರು.

ಗುರು ದಿ! ಇರಾ ಗೋಪಾಲಕೃಷ್ಣ ‌ಭಾಗವತರಲ್ಲಿ ಯಕ್ಷಗಾನದ ಕಲಾಪ್ರಕಾರಗಳನ್ನು ಅಭ್ಯಾಸ ಮಾಡಿದರು.

ಇವರು ಕಟೀಲು , ಮುಚ್ಚೂರು, ಸುಂಕದಕಟ್ಟೆ, ಧರ್ಮಸ್ಥಳ, ಪೊಳಲಿ ರಾಜರಾಜೇಶ್ವರಿ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿ ಸ್ವಯಂನಿವೃತ್ತಿ ಬಳಿಕ ಕೃಷಿ ಕ್ಷೇತ್ರದಲ್ಲಿ ಪ್ರಗತಿಪರ ಕೃಷಿಕರಾಗಿ ಗುರುತಿಸಿ ಕೊಂಡಿದ್ದರು

More from the blog

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...