Wednesday, January 28, 2026

ನಂದಾವರ ದೇವಸ್ಥಾನದ ಕಚೇರಿಯಲ್ಲಿ ಹೃದಯಾಘಾತದಿಂದ ನಿಧನ

ಬಂಟ್ವಾಳ: ಹೃದಯಘಾತದಿಂದ ದೇವಸ್ಥಾನದ ಕಚೇರಿಯಲ್ಲಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ
ನಂದಾವರ ನಿವಾಸಿ ಮಹಾಬಲ ಗಟ್ಟಿ (87) ಮೃತಪಟ್ಟ ವ್ಯಕ್ತಿ.
ಇವರು ಕೆಲವು ವರ್ಷಗಳಿಂದ ಬಿ.ಪಿ.ಶುಗರ್ ಸಮಸ್ಯೆಯಿಂದ ಇದ್ದರೂ ಕೂಡ ದೇವಸ್ಥಾನದ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು.
ಎಳೆಯ ವಯಸ್ಸಿನಲ್ಲಿಯೇ 1945 ರಿಂದ ನಂದಾವರ ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದ ಇವರು ಇತ್ತೀಚಿನ ಕೆಲ ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು.
ಅ ಬಳಿಕ ದೇವಸ್ಥಾನದ ಸೇವೆಯನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.
ನಂದಾವರ ಕ್ಷೇತ್ರದ ಜಾತ್ರೋತ್ಸವದ ಸಂದರ್ಭದಲ್ಲಿ ಸಂಪೂರ್ಣ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸುತ್ತಿದ್ದರು.
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದ್ದ ಎನ್.ಮಹಾಬಲ ಗಟ್ಟಿ. ಇವರು ಇಂದು ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಕಚೇರಿಯ ಬಳಿ ಕುಳಿತು ಕೊಂಡಿದ್ದವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಆಡಳಿತ ಮಂಡಳಿಯ ಮೂಲಗಳು ತಿಳಿಸಿವೆ.
ಇವರು ನಂದಾವರ ಶ್ರೀ ವಿಘ್ನೇಶ್ವರ ಸೇವಾ ಸಮಿತಿಯ ಗೌರವ ಸಲಹೆಗಾರರಾಗಿದ್ದರು.
ಇವರು ಪತ್ನಿ ಹಾಗೂ ಎರಡು ಗಂಡು, ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಕಾರ್ಯ ನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಗಳು ಸಂತಾಪ ವ್ಯಕ್ತಪಡಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...