Tuesday, January 27, 2026

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ದೀಪಾವಳಿ ಸಂದೇಶ

ಧರ್ಮಸ್ಥಳ: ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಎಲ್ಲರೂ ಆರೋಗ್ಯ ಭಾಗ್ಯವನ್ನು ಹೊಂದಿ ಭಯ ಮುಕ್ತ ವಾತಾವರಣದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ, ಎಲ್ಲರಿಗೂ ದೀಪಾವಳಿಯ ಶುಭಾಶಯಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜನತೆಗೆ ದೀಪಾವಳಿ ಸಂದೇಶ ನೀಡಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...