Monday, July 14, 2025

ದೆಹಲಿ ಗಲಭೆ: ಅಗ್ನಿಶಾಮಕ ಇಲಾಖೆಯಿಂದ ಹಲವಾರು ಮಾಹಿತಿಗಳು

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಮೂರು ದಿನ ನಡೆದ ಹಿಂಸಾಚಾರದಲ್ಲಿ ಅಂದಾಜು 79 ಮನೆಗಳು, 52 ಅಂಗಡಿ, 5 ಗೋದಾಮು, 3 ಕಾರ್ಖಾನೆ, 4 ಮಸೀದಿಗಳು ಹಾಗೂ 500 ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥರು ಹೇಳಿದ್ದಾರೆ. ಗಲಭೆಯಲ್ಲಿ 38 ಮಂದಿ ಮೃತಪಟ್ಟು, 350ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಲಭೆ ವೇಳೆ ದೆಹಲಿ ಅಗ್ನಿಶಾಮಕ ಠಾಣೆಗೆ 218 ಕರೆಗಳು ಬಂದಿದ್ದು, ಬಹುತೇಕ ಎಲ್ಲ ಕರೆಗಳಿಗೆ ಸ್ಪಂದಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗರ್ಗ್ ತಿಳಿಸಿದರು.
ಕಟ್ಟಡ ಹಾಗೂ ವಾಹನಗಳಿಗೆ ಸೀಮೆಎಣ್ಣೆ ಹಾಗೂ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಲಾಗಿದೆ. ಬೆಂಕಿಗೆ ತುತ್ತಾದ ಅಂಗಡಿ ಹಾಗೂ ಕಟ್ಟಡಗಳನ್ನು ಮುಚ್ಚಲಾಗಿದೆ. ಮಂಗಳವಾರ ಅಧಿಕ ಅಗ್ನಿ ಅನಾಹುತಗಳು ಕಂಡು ಬಂದಿವೆ ಎಂದು ಹೇಳಿದರು.

More from the blog

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...

‘ಶಕ್ತಿ ಯೋಜನೆʼಯಡಿ 500 ಕೋಟಿ ಮಹಿಳೆಯರ ಪ್ರಯಾಣ : ಬಿ.ಸಿ.ರೋಡ್ ನಲ್ಲಿ ಸಂಭ್ರಮಾಚರಣೆ..

ಬಂಟ್ವಾಳ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ೫೦೦ ಕೋಟಿ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ತಾಲೂಕು...

ಯುವವಾಹಿನಿ ಬಂಟ್ವಾಳ ಘಟಕ : ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ..

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ...