Monday, February 2, 2026

ದೆಹಲಿಯಲ್ಲಿ ಪೇಜಾವರಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಗುರುವಂದನೆ

(ರೊನಿಡಾ ಮುಂಬಯಿ)

ಮುಂಬಯಿ: ಗುರುಪೂರ್ಣಿಮೆಯ ಶುಭಾವಸರದಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ದೆಹಲಿಯಲ್ಲಿ ಮೊಕ್ಕಂ ಹೂಡಿದ್ದು, ಭಾರತ ರಾಷ್ಟ್ರದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ, ಅಣು ಇಂಧನ ಇಲಾಖೆ, ಬಾಹ್ಯಾಕಾಶ ಇಲಾಖೆ ಮತ್ತು ಎಲ್ಲ ಮಹತ್ವದ ನೀತಿ ವಿಚಾರಗಳ ಇತ್ಯಾದಿ ಖಾತೆಗಳ ಹೊಣೆ ವಹಿಸಿ ವಿಶ್ವಮಾನ್ಯ ಪ್ರಧಾನಿ ಹೆಸರಾಂತ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀಗಳಿಗೆ ಗುರುವಂದನೆ ಸಲ್ಲಿಸಿದರು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರೀಯ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಮತ್ತು ಸೂಕ್ಷ , ಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವ ನಿತಿನ್ ಜೈರಾಮ್ ಗಡ್ಕರಿ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ (ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ) ಡಿ.ವಿ ಸದಾನಂದ ಗೌಡ, ಮಾಜಿ ಸಚಿವೆ ಉಮಾ ಭಾರತಿ, ಹರೀಶ್ ಪೊಕ್ರೈಲ್ ಸೇರಿದಂತೆ ನೂರಾರು ಗಣ್ಯರು ಆಗಮಿಸಿ ಗುರುವಂದನೆ ಸಲ್ಲಿಸಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...