Tuesday, July 1, 2025

ದೇರಾಜೆ-ಚನಿಲ ರಸ್ತೆ ದುರಸ್ತಿ, ಪೈಪು ಲೈನ್ ವಿಸ್ತರಣೆಗೆ ಗುದ್ದಲಿ ಪೂಜೆ

ವಿಟ್ಲ: ಸರಕಾರದ ಕಾಮಗಾರಿಗಳನ್ನು ಟೆಂಡರ್‌ನಲ್ಲಿ ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಲು ಮತ್ತು ಅದರ ಗುಣಮಟ್ಟವನ್ನು ಕಾಪಾಡುವಂತೆ ನಿಗಾ ವಹಿಸುವ ಕಾರ್‍ಯಕ್ಕೆ ತಾನು ಒತ್ತು ಕೊಡುತ್ತಿದ್ದೇನೆ. ಕೆಲಸ ನಡೆಯುವಾಗ ಗುಣ ಮಟ್ಟದ ಬಗ್ಗೆ ಫಲಾನುಭವಿಗಳೂ ಗಮನ ಹರಿಸುವ ಅಗತ್ಯವಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಬಲ್ನಾಡು ಗ್ರಾ.ಪಂ.ವ್ಯಾಪ್ತಿಯ ದೇರಾಜೆ-ಚನಿಲ ರಸ್ತೆ ದುರಸ್ತಿ ಮತ್ತು ಕೆರೆಮೂಲೆ-ಕಬರಮುಗೇರು ಕುಡಿಯುವ ನೀರಿನ ಪೈಪು ಲೈನ್ ವಿಸ್ತರಣೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ದೇರಾಜ-ಚನಿಲ ರಸ್ತೆ ದುರಸ್ತಿಗೆ ಟಾಸ್ಕ್‌ಫೋರ್ಸ್ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಸೇರಿ ಒಟ್ಟು ರೂ. 10 ಲಕ್ಷ ಅನುದಾನ ಬಿಡುಗಡೆಗೊಂಡಿದೆ. ಸರಕಾರದಿಂದ ಸಾಕಷ್ಟು ಅನುದಾನ ದೊರಕದೆ ಇರುವುದರಿಂದ ಮಂಜೂರಾದ ಹಣವನ್ನು ಅಗತ್ಯವಿರುವಲ್ಲಿಗೆ ವಿನಿಯೋಗ ಮಾಡುತ್ತಿದ್ದೇನೆ. ಬಲ್ನಾಡು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಾಲೋನಿ ಅಭಿವೃದ್ಧಿಗೆ ರೂ. 10 ಲಕ್ಷ ಬಿಡುಗಡೆಯಾಗಿದ್ದು, ಈಗಾಗಲೇ ಟೆಂಡರ್ ಆಗಿದೆ ಎಂದರು.
ಪುತ್ತೂರು ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರು ಮಾತನಾಡಿ, ಚನಿಲ-ದೇರಾಜೆ ರಸ್ತೆಯ ಸುಮಾರು 1 ಕಿ.ಮೀ. ಭಾಗ ತೀರ ಹದಗೆಟ್ಟಿದ್ದು, ಬಿಡುಗಡೆಯಾದ ಅನುದಾನದಲ್ಲಿ ಶೇ.50 ರಷ್ಟು ಭಾಗ ದುರಸ್ತಿಯಾಗಬಹುದು ಎಂದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ಶಯನಾ ಜಯಾನಂದ, ತಾ.ಪಂ.ಸದಸ್ಯೆ ದಿವ್ಯ ಪುರುಷೋತ್ತಮ್, ಬಲ್ನಾಡು ಗ್ರಾ.ಪಂ.ಸದಸ್ಯರಾದ ಬಾಲಕೃಷ್ಣ ನಾಯ್ಕ, ಇಂದಿರಾ ಎಸ್. ರೈ ಬೀಡು, ಬಿಜೆಪಿ ಗ್ರಾಮ ಸಮಿತಿ ಪ್ರ. ಕಾರ್‍ಯದರ್ಶಿ ಶಿವಪ್ರಸಾದ್ ರೈ ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಸ್ವಾಗತಿಸಿದರು. ಅನಂತರಾಮ ರೈ, ಮಮತಾ, ಯಮುನಾ, ರಾಮಚಂದ್ರ ರೈ ಬೀಡು, ನಾರಾಯಣ ನಾಯ್ಕ, ಜಗನ್ಮೋಹನ ರೈ, ನಾರಾಯಣ ಪಾಟಾಳಿ ಸಹಕರಿಸಿದರು. ಬಜರಂಗ ದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ ವಂದಿಸಿದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...