Sunday, February 1, 2026

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ
ಮಾರಿಪಳ್ಳದಲ್ಲಿ ನಡೆದಿದೆ.


ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ.
ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು ‌4 ಗಂಟೆಗೆ ಹೊರಟಿದ್ದ.
ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.
ಮುಂಜಾವಿನ ವೇಳೆ ನಿದ್ದೆ ಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...