Wednesday, January 28, 2026

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ ಪ್ರಯುಕ್ತ ಉತ್ಸವ : ಧರ್ಮಸ್ಥಳ ಮೇಳದ ತಿರುಗಾಟ ಸಮಾಪ್ತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವೃಷಭ ಮಾಸದ 10ನೇ ದಿನ ಪತ್ತನಾಜೆಯ ಪ್ರಯುಕ್ತ ಮೇ 25ರಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ರಂಗ ಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆ ನಡೆದು, ಧ್ವಜಮರ ಅವರೋಹಣದೊಂದಿಗೆ ಶ್ರೀ ದೇವರ ಉತ್ಸವ ಮೂರ್ತಿ ಗರ್ಭ ಗುಡಿ ಪ್ರವೇಶಿಸುವ ಮೂಲಕ ಉತ್ಸವ ನೆರವೇರಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ತಿರುಗಾಟ ಪತ್ತನಾಜೆಯಂದು ಸಮಾಪನಗೊಂಡಿತು. ಮೇಳದ ಶ್ರೀ ಮಹಾಗಣಪತಿ ದೇವರನ್ನು ಮೇ 25ರಂದು ಸಂಜೆ ಬಿಡಾರದ ಮಣೆಗಾರರ ಮನೆಯಿಂದ ವೈಭವ ಪೂರ್ಣ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಅಲಂಕೃತ ಶ್ರೀ ಮಹಾಗಣಪತಿ ದೇವ ರನ್ನು ಸಕಲ ಗೌರವಗಳೊಂದಿಗೆ ನರ್ತನ ಸೇವೆಯಲ್ಲಿ ಕರೆತರಲಾಯಿತು.

ಕ್ಷೇತ್ರದ ಆನೆಗಳು, ಬಸವ, ಹೂವಿನ ಕೋಲು, ವಾದ್ಯ ಮೇಳ, ಚೆಂಡೆ ಮೇಳ, ಶಂಖ ಜಾಗಟೆ ವಾದನಗಳೊಂದಿಗೆ ರಥಬೀದಿಯಲ್ಲಿ ಸಾಗಿಬಂದು ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ಅಮ್ಮನವರ ಸನ್ನಿಧಿ ಮುಂಭಾಗದಲ್ಲಿ ದರ್ಶನ ಸೇವೆ ನಡೆಸಿ ಬಳಿಕ ಛತ್ರ ಮಹಾಗಣಪತಿ ಗುಡಿಗೆ ಪ್ರವೇಶಿಸಲಾಯಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಮೇಳದ ಯಜಮಾನ ಡಿ.ಹರ್ಷೇಂದ್ರ ಕುಮಾರ್‌, ಹೆಗ್ಗಡೆ ಕುಟುಂಬಸ್ಥರು, ಕ್ಷೇತ್ರ ಹಾಗೂ ಮೇಳದ ಸಿಬಂದಿ ವರ್ಗ ಹಾಗೂ ಭಕ್ತರು ಭಾಗವಹಿಸಿದ್ದರು.

ಮುಂದಿನ ಕಾರ್ತಿಕ ಮಾಸದ ದೀಪಾವಳಿಯವರೆಗೆ ಕ್ಷೇತ್ರದಲ್ಲಿ ಯಾವುದೇ ವಿಶೇಷ ಸೇವೆಗಳು, ಉತ್ಸವ ಗಳು ನಡೆಯುವುದಿಲ್ಲ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...