Saturday, June 28, 2025

ಒಡ್ಡೂರು ಧರ್ಮಚಾವಡಿಯಲ್ಲಿ ಶ್ರೀ ಕೊಡಮಣಿತ್ತಾಯ ಧರ್ಮದೈವದ ಧರ್ಮನೇಮೋತ್ಸವ

ಬಂಟ್ವಾಳ: ಒಡ್ಡೂರು ಫಾರ್ಮ್ಹೌಸ್‌ನಲ್ಲಿ ಫೆ. 24ರಿಂದ ಪ್ರಾರಂಭಗೊಂಡಿದ್ದ ನೂತನ ಒಡ್ಡೂರು ಧರ್ಮಚಾವಡಿಯಲ್ಲಿ ಶ್ರೀ ಕೊಡಮಣಿತ್ತಾಯ ಧರ್ಮದೈವದ ಪ್ರತಿಷ್ಠೆ, ಶತಚಂಡಿಕಾಯಾಗ ಹಾಗೂ ಧರ್ಮನೇಮೋತ್ಸವದ ಧಾರ್ಮಿಕ, ವೈದಿಕ ವಿಧಿ ವಿಧಾನಗಳು ಫೆ.29ರ ರಾತ್ರಿ ಜರಗಿದ ಧರ್ಮನೇಮೋತ್ಸವದೊಂದಿಗೆ ಸಂಪನ್ನಗೊಂಡಿತು.

ಧರ್ಮನೇಮೋತ್ಸವದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲು, ಪುತ್ತೂರು ಶಾಸಕ ಸಂಜೀವ ಮಠಂದೂರು, ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್‌ಕುಮಾರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಉತ್ತರ ಶಾಸಕ ಡಾ| ವೈ.ಭರತ್ ಶೆಟ್ಟಿ, ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ, ಕೆ.ಅಭಯಚಂದ್ರ ಜೈನ್, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಮೊದಲಾದ ಗಣ್ಯರು ಭಾಗವಹಿಸಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹಾಗೂ ಉಳಿಪ್ಪಾಡಿಗುತ್ತು ಕುಟುಂಬಸ್ಥರು ಆಗಮಿಸಿದ ಗಣ್ಯರು, ಭಕ್ತಾಧಿ ಗಳನ್ನು ಸ್ವಾಗತಿಸಿ ಸತ್ಕರಿಸಿದರು. ಫೆ. 29ರ ಮಧ್ಯಾಹ್ನ ನಡೆದ ಶತಚಂಡಿಕಾಯಾಗ, ಧರ್ಮನೇಮೋತ್ಸವದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಆಗಮಿಸಿದ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಸಚಿರುಚಿಯನ್ನು ಅನುಭವಿಸಿದರು. ಬಿ.ಸಿ.ರೋಡಿನಿಂದ ಉಚಿತ ಬಸ್ಸಿನ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಹೆಚ್ಚಿನ ಮಂದಿ ಅದರ ಪ್ರಯೋಜನವನ್ನೂ ಪಡೆದುಕೊಂಡರು. ಸಾವಿರಾರು ಸ್ವಯಂಸೇವಕರು ಎಲ್ಲಾ ಕಾರ್ಯಕ್ರಮಗಳ ಯಶಸ್ಸಿನಲ್ಲಿ ಶ್ರಮಿಸಿರುವುದು ವಿಶೇಷವಾಗಿತ್ತು.

 

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...