ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸೋಮವಾರ ರಾತ್ರಿ ಅಮೃತವರ್ಷಿಣಿ ಸಭಾ ಭವನದಲ್ಲಿ ಬೆಂಗಳೂರಿನ ಪಾರ್ಶ್ವನಾಥ್ ಉಪಾಧ್ಯಾಯ ಮತ್ತು ಬಳಗದವರಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.


ಉಜಿರೆಯ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾದವು.