Saturday, June 28, 2025

ಮೇ 1 :ಧರ್ಮಸ್ಥಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಧರ್ಮಸ್ಥಳ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಮೇ1 ರಂದು ಬುಧವಾರ ಸಾಯಂಕಾಲ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಲ ಸೂತ್ರವನ್ನು ನೀಡಲಾಗುವುದು. ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೆ ಭರಿಸಲಾಗುವುದು.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಕಳೆದ ವರ್ಷದ ವರೆಗೆ 12,160 ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ: 9663464648, 08256-277144.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...