Tuesday, January 27, 2026

ಕೊರೊನಾ ನಿರ್ಮೂಲನೆಯೊಂದಿಗೆ ಲೋಕಕಲ್ಯಾಣಕ್ಕಾಗಿ ಧರ್ಮಸ್ಥಳದಲ್ಲಿ ವಿಶೇಷ ಪ್ರಾರ್ಥನೆ ಇಂದು ರಾತ್ರಿ 9 ಗಂಟೆಗೆ 

 

ಉಜಿರೆ: ಕೊರೊನಾ ನಿರ್ಮೂಲನೆಯೊಂದಿಗೆ ವಿಶ್ವಶಾಂತಿ ಮತ್ತು ಲೋಕ ಕಲ್ಯಾಣಕ್ಕಾಗಿ ಇಂದು, ಭಾನುವಾರ ರಾತ್ರಿ 9 ಗಂಟೆಗೆ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ ಮಾಡುವುದಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

ಕೊರೊನಾ ನಿರ್ಮೂಲನೆಗಾಗಿ ನಾವೆಲ್ಲ ವಿಶ್ವದ ಎಲ್ಲಾ ಜನರೊಂದಿಗೆ ಏಕತೆ, ಸಂಘಟನೆ ಮತ್ತು ಪ್ರಜ್ಞೆಯೊಂದಿಗೆ ಹೋರಾಟ ನಡೆಸುತ್ತಿದ್ದೇವೆ.

ಪ್ರಧಾನಿಯವರ ಸಲಹೆಯಂತೆ ಎಲ್ಲರೂ ಭಾನುವಾರ ರಾತ್ರಿ 9 ಗಂಟೆಗೆ ತಮ್ಮ ಮನೆಯಲ್ಲಿ ಜ್ಯೋತಿ ಬೆಳಗಿಸಿ ಕೊರೊನಾ ನಿರ್ಮೂಲನೆಯೊಂದಿಗೆ ವಿಶ್ವದ ಎಲ್ಲಾ ಜನರ ನೆಮ್ಮದಿ ಮತ್ತು ಉಜ್ವಲ ಭವಿಷ್ಯದೊಂದಿಗೆ ಸುಖ-ಶಾಂತಿಗಾಗಿ ಪ್ರಾರ್ಥಿಸೋಣ. ಜ್ಯೋತಿಗೆ ಬಡವ-ಬಲ್ಲಿದ, ಮೇಲು-ಕೀಳು ಅಥವಾ ಪ್ರಾದೇಶಿಕ ಬೇಧ, ಇಲ್ಲ. ಇತರರ ಸಂತೋಷವನ್ನು ನಾವೆಲ್ಲರೂ ಹಂಚಿಕೊಂಡು ಅನುಭವಿಸೋಣ.

ಜ್ಯೋತಿ ಪ್ರತಿಯೊಬ್ಬರ ಮನದ ಹಾಗೂ ಮನೆಯ ಕತ್ತಲನ್ನು ಹೋಗಲಾಡಿಸಿ ವಿಶ್ವಶಾಂತಿಗೆ ಪ್ರೇರಕವಾಗಲಿ. ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿ ಎಂದು ಎಲ್ಲರೂ ಏಕಕಾಲದಲ್ಲಿ ಪ್ರಾರ್ಥಿಸೋಣ ಎಂದು ಹೆಗ್ಗಡೆಯವರು ಸಲಹೆ ನೀಡಿದ್ದಾರೆ.

ಎಲ್ಲರೂ ಪ್ರಧಾನಿಯವರ ಕರೆಯನ್ನು ಪ್ರೀತಿಯಿಂದ ಸ್ವಾಗತಿಸಿ ಅನುಷ್ಠಾನಗೊಳಿಸಿ ಆನಂದಿಸೋಣ. ಕೊರೊನಾ ಶೀಘ್ರ ನಿರ್ಮೂಲನೆಯಾಗಿ ವಿಶ್ವದೆಲ್ಲೆಡೆ ಸುಖ, ಶಾಂತಿ, ನೆಮ್ಮದಿ ನೆಲೆಸಲಿ ಎಂದು ಅವರು ಹಾರೈಸಿದ್ದಾರೆ.

 

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...