Wednesday, July 9, 2025

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕವಾಗಿ ನಡೆಯುವ ವಿಷು ಮಾಸದ ಜಾತ್ರೆ ರದ್ದು

ಧರ್ಮಸ್ಥಳ:  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕವಾಗಿ ನಡೆಯುವ ವಿಷು ಮಾಸದ ಜಾತ್ರೆಯನ್ನು ದೇವಪ್ರಶ್ನೆಯ ಮೂಲಕ ಪರಿಶೀಲಿಸಲಾಗಿ ಸಾಂಪ್ರಾದಾಯಿಕವಾಗಿ ನಡೆಯುವ ಶ್ರೀ ಧರ್ಮದೇವತೆಗಳ, ಶ್ರೀ ಅಣ್ಣಪ್ಪ ಸ್ವಾಮಿಯ ನೇಮ – ಕೋಲಗಳು ಮುಂದೆ ಐದು ದಿನಗಳ ಕಾಲ ನಡೆಯಬೇಕಾಗಿದ್ದ ಶ್ರೀ ಮಂಜುನಾಥ ಸ್ವಾಮಿಯ ರಥೋತ್ಸವ, ವಿವಿಧ ಕಟ್ಟೆಗಳಿಗೆ ವಿಹಾರ ಇತ್ಯಾದಿಗಳ ಜೊತೆಗೆ ನೇತ್ರಾವತಿ ನದಿಗೆ ಅವಭೃತ ವಿಹಾರ ಮಾಡುವುದನ್ನು ರದ್ದುಪಡಿಸಲಾಗಿದೆ.
ಈ ಸಂದರ್ಭದಲ್ಲಿ ಸದ್ಯಕ್ಕೆ ಭಕ್ತರು ಹಾಗೂ ಸಾರ್ವಜನಿಕರು ಕ್ಷೇತ್ರಕ್ಕೆ ಬರುತ್ತಿಲ್ಲ. ಮುಂದೆ ಕೂಡಾ ಪ್ರವೇಶ, ದರ್ಶನವನ್ನು ಮುಂದಿನ ಸೂಚನೆಯ ತನಕ ರದ್ದುಪಡಿಸಲಾಗಿದೆ.
ಈ ಎಲ್ಲವೂ ದೇವಪ್ರಶ್ನೆಯ ಮೂಲಕ ಶ್ರೀ ಸ್ವಾಮಿಯ ಒಪ್ಪಿಗೆ ಪಡೆದು ಪರಿವರ್ತನೆಗೊಂಡಿರುವುದರಿಂದ ಭಕ್ತರು ಯಾವುದೇ ಸಂಕೋಚ ಪಡಬೇಕಾಗಿಲ್ಲ. ಈ ಸಂದರ್ಭದಲ್ಲಿ ಕೊರೋನಾ ಸೋಂಕು ರೋಗ ಮುಕ್ತಿಗಾಗಿ ಪ್ರಾರ್ಥನೆ ಮಾಡುತ್ತಾ ದೈವ ದೇವರುಗಳು ಈ ರೀತಿಯ ಪರಿವರ್ತನೆಗೆ, ಬದಲಾವಣೆಗಳಿಗೆ ಮತ್ತು ಸಾಂಕೇತಿಕ ಸೇವೆಗಳಿಗೆ ಒಪ್ಪಿ ಅನುಗ್ರಹಿಸಿರುವುದನ್ನು ಪರಿಗಣಿಸಿ ಶ್ರೀ ಕ್ಷೇತ್ರದ ಭಕ್ತರು, ಅಭಿಮಾನಿಗಳು ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ಮುಂದಿನ ದಿನಗಳ ಸುಭೀಕ್ಷೆಗಾಗಿ ಸರಕಾರದ ಈ ಆದೇಶಗಳನ್ನು ಪರಿಪಾಲಿಸುತ್ತಾ ಸಹಕರಿಸಬೇಕೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...