Thursday, February 5, 2026

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ರತ್ನಗಿರಿಯಲ್ಲಿ ವಾಸ್ತುಪೂಜೆ, ನವಗ್ರಹ ಮಹಾಶಾಂತಿ, ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಅಂಗವಾಗಿ ಭಾನುವಾರ ರತ್ನಗಿರಿಯಲ್ಲಿ ವಾಸ್ತುಪೂಜಾ ವಿಧಾನ, ನವಗ್ರಹ ಮಹಾಶಾಂತಿ, ದಿಕ್ಪಾಲಕ ಬಲಿ, ಯಜ್ಞ ಶಾಲೆಯಲ್ಲಿ ಯಕ್ಷಾರಾಧನೆ ಪೂರ್ವಕ ಯಕ್ಷ ಪ್ರತಿಷ್ಠೆ, ಅಭಿಜಿನ್ ಮುಹೂರ್ತದಲ್ಲಿ ಗಂಟೆ 12.35ಕ್ಕೆ ಧ್ವಜಾರೋಹಣ ನಡೆಯಿತು.
ಬಳಿಕ ಜಲ, ಹಾಲು, ಗಂಧ, ಚಂದನ, ಅರಿಶಿನ ಮೊದಲಾದ ಮಂಗಲದ್ರವ್ಯಗಳಿಂದ ಬಾಹುಬಲಿ ಸ್ವಾಮಿಗೆ ಐವತ್ತ ನಾಲ್ಕು ಕಲಶಗಳಿಂದ ಪಾದಾಭಿಷೇಕ ನಡೆಯಿತು.
ಸಂಜೆ ಗಂಟೆ ಮೂರರಿಂದ ಶ್ರೀ ಪೀಠ ಯಂತ್ರಾರಾಧನೆ, ಧ್ವಜಪೂಜೆ, ಶ್ರೀ ಬಲಿ ವಿಧಾನ ಮತ್ತು ಮಹಾ ಮಂಗಳಾರತಿ ನಡೆಯಿತು.

ಇಂದಿನ ಕಾರ್ಯಕ್ರಮ: ಇಂದು ಸೋಮವಾರ 108 ಕಲಶಗಳಿಂದ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ ನಡೆಯುತ್ತದೆ.
ಬಾಹುಬಲಿ ಪಂಚಮಹಾವೈಭವ: ಅಮೃತವರ್ಷಿಣಿ ಸಭಾ ಭವನದ ಪಕ್ಕದಲ್ಲಿರುವ ಪಂಚಮಹಾವೈಭವ ಮಂಟಪದಲ್ಲಿ ಸೋಮವಾರ ಬೆಳಿಗ್ಗೆ ಗಂಟೆ 9.30 ರಿಂದ ಆದಿನಾಥ ಮಹಾರಾಜರ ಆಡಳಿತದಲ್ಲಿ ನವಯುಗ ಆರಂಭ, ಪ್ರಜೆಗಳಿಗೆ ಅಸಿ.ಮಸಿ, ಕೃಷಿ ಬಗ್ಯೆ ಮಾರ್ಗದರ್ಶನದ ರೂಪಕ ಪ್ರದರ್ಶನ ನಡೆಯುತ್ತದೆ.
ಸಂಜೆ ಗಂಟೆ 4 ರಿಂದ ಆದಿನಾಥರ ಮಕ್ಕಳ ಬಾಲಲೀಲೋತ್ಸವ ನಡೆಯುತ್ತದೆ.

ಆರ್. ಯನ್. ಪೂವಣಿ, ಉಜಿರೆ

More from the blog

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...

ಸುಮಂತ್ ಸಾವಿನ ಪ್ರಕರಣ : ಪೊಲೀಸರ ತನಿಖೆ ಚುರುಕು..

ಬೆಳ್ತಂಗಡಿ : ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಸಾವನ್ನಪ್ಪಿ ಇಂದಿಗೆ 22 ದಿನ ಕಳೆದರೂ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಸುಳಿವು ಸಿಕ್ಕಿಲ್ಲ. ಜ.14.ರಂದು ಬೆಳಿಗ್ಗೆ ಧನುಪೂಜೆಗೆಂದು ಮುಂಜಾನೆ ಮನೆಯಿಂದ ಹೋದ...

ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಹೆದ್ದಾರಿಯಲ್ಲಿ ದಾರಿ ಸೂಚನಾ ಫಲಕ ಅಳವಡಿಕೆ..

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿರೋಡ್ - ಅಡ್ಡಹೊಳೆ ಚತುಷ್ಪಥ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೀಗ ಕಮಾನು ಮಾದರಿಯಲ್ಲಿ ದಾರಿ ಸೂಚಕ ಫಲಕ ಅಳವಡಿಕೆಯ ಕಾರ್ಯ ಆರಂಭಗೊಂಡಿದೆ. ರಸ್ತೆ ನಿರ್ಮಾಣದ ಕಾಂಕ್ರೀಟ್ ಕಾಮಗಾರಿ...