Thursday, July 10, 2025

ಧರ್ಮಸ್ಥಳ: ಮಂಜುನಾಥ ಸ್ವಾಮಿ ದೇವಾಲಯ ಹೊರಡಿಸಿದ ಮೂರು ಪ್ರಕಟಣೆಗಳು

ಧರ್ಮಸ್ಥಳ: ನಾಡಿನ ಧರ್ಮದೇಗುಲ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಮೂರು ಪ್ರಕಟಣೆಯನ್ನು ಹೊರಡಿಸಿದೆ. ಈ ಬಗ್ಗೆ ಪತ್ರಿಕಾ ಜಾಹೀರಾತನ್ನೂ ನೀಡಲಾಗಿದೆ.

ಒಂದು ವಾರದಿಂದ ಒಬ್ಬರೂ ದೇವರ ದರ್ಶನಕ್ಕೆ ಬಂದಿಲ್ಲ. ಸೌರಮಾನ ಯುಗಾದಿಯ ವೇಳೆ ಕ್ಷೇತ್ರದಲ್ಲಿ ನಡೆಯುವ ವಿಷು ಮಾಸದ ಜಾತ್ರೆಯನ್ನು ರದ್ದು ಪಡಿಸಲಾಗಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದರು.

ಧರ್ಮಸ್ಥಳ ಕ್ಷೇತ್ರದಿಂದ ಹೊರಡಿಸಲಾದ ಹೊಸ ಮೂರು ಪ್ರಕಟಣೆಗಳು: 

1. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ತಿರುಗಾಟವನ್ನು ಕಳೆದ 24 ದಿನಗಳಿಂದ ಸ್ಥಗಿತಗೊಳಿಸಲಾಗಿದೆ. ಈಗಿನ ಸಂದರ್ಭವನ್ನು ಗಮನದಲ್ಲಿರಿಸಿಕೊಂಡು ಈ ಸಾಲಿನ ತಿರುಗಾಟವನ್ನು ರದ್ದು ಪಡಿಸಲು ನಿಶ್ಚಿಯಿಸಲಾಗಿದೆ. ಮುಂದಿನ ವರ್ಷದ ಕಾರ್ಯಕ್ರಮಗಳ ಬಗ್ಗೆ ಸೇವಾಕರ್ತರೊಂದಿಗೆ ಸಮಾಲೋಚಿಸಿ ನಿರ್ಧರಿಸಲಾಗುವುದು.

2. ಶ್ರೀ ಧರ್ಮಸ್ಥಳದಲ್ಲಿ ಇದೇ ಬರುವ 29ನೇ ಏಪ್ರಿಲ್, 2020ರ ಬುಧವಾರದಂದು ಸಾಮೂಹಿಕ ವಿವಾಹ ಸಮಾರಂಭವನ್ನು ನಿಗದಿ ಪಡಿಸಲಾಗಿತ್ತು. ಸದ್ಯದ ಲಾಕ್ ಡೌನ್ ಪರಿಸ್ಥಿತಿಯಲ್ಲಿ ಈ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ.

3. ಶ್ರೀ ಧರ್ಮಸ್ಥಳದಿಂದ ಪ್ರಕಟಿಸಲಾಗುತ್ತಿರುವ ಮಂಜುವಾಣಿ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಪ್ರಕಟಗೊಳ್ಳುತ್ತಿರುವ ನಿರಂತರ ಪತ್ರಿಕೆಗಳ ಪ್ರಕಟಣೆ ಹಾಗೂ ವಿತರಣೆಗೆ ತೊಡಕಾಗಿರುವುದರಿಂದ ಮುಂದಿನ ಮೇ ತಿಂಗಳಿನ ಪತ್ರಿಕೆಗಳನ್ನು ಪ್ರಕಟಿಸಲಾಗುವುದಿಲ್ಲ.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...