Thursday, February 13, 2025

ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

ಬಂಟ್ವಾಳ: ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೆರೇಪಿಸಿ ಎಂದು ಸಾಹಿತಿ ಮಂಚಿ ಕೊಲ್ನಾಡು ಪ್ರೌಢಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಅಭಿಪ್ರಾಯ ಪಟ್ಟರು.

ಅವರು ಭಾನುವಾರ ಬಂಟ್ವಾಳ ಮಂಜುನಾಥಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಡಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ “ಹದಿಹರೆಯದ ಮಕ್ಕಳನ್ನು ಸಭ್ಯ ನಾಗರಿಕರಗಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ” ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತಾಡಿದರು. . ಮಕ್ಕಳನ್ನು ಶಾಲೆಯ ತರಗತಿಯಲ್ಲಿ ಪಡೆಯುವ ಅಂಕಗಳ ಹಿಂದೆ ಹೋಗದೆ ಸಂಸ್ಕಾರ, ಸಂಸ್ಕೃತಿಯ ಹಿಂದೆ ಹೋಗುವಂತೆ ಬೆಳೆಸಬೇಕು, ಮಕ್ಕಳಿಗೆ ಮೊದಲು ಮನೆ ಕೆಲಸ ಮಾಡಲು ಕಲಿಸಿ, ಮಕ್ಕಳನ್ನು ಬೇರೆಯವರೊಡನೆ ತುಲನೆ ಮಾಡಲು ಹೋಗಬೇಡಿ, ಪ್ರೀತಿ ವಾತ್ಸಲ್ಯದಿಂದ ದಾರಿ ತಪ್ಪದ ರೀತಿಯಲ್ಲಿ ಬೆಳೆಸಿರಿ ಎಂದು ಮಾತೆಯರಿಗೆ ಕಿವಿಮಾತು ಹೇಳಿದರು.

ಬಂಟ್ವಾಳ ತುಳು ಕೂಟದ ಅಧ್ಯಕ್ಷ ಸುಧರ್ಶನ್ ಜೈನ್ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಿಳೆ ಸ್ವಾವಲಂಬಿಯಾಗಿ ಸಂಘಟತ್ಮಕವಾಗಿ ಬೆಳೆಯಲು ಜ್ಞಾನವಿಕಾಸ ಕಾರ್ಯಕ್ರಮಗಳು ಸ್ಪೂರ್ತಿ ದಾಯಕ ವಾಗಿದೆ ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ಸರಕಾರದ ಬಾಲವನದ ಮಾಜಿ ಅಧ್ಯಕ್ಷರಾದ ಸುಲೋಚನಾ ಜಿ ಕೆ ಭಟ್ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರಲ್ಲಿ ಅರಿವು ಮೂಡಿಸಿ ಮಾತೆಯರನ್ನು ಸ್ವಾವಲಂಬಿಗಳಾಗಿ ಮಾಡಿಸುವ ಉದ್ದೇಶದಿಂದ ಪ್ರಾರಂಭವಾದ ಕೇಂದ್ರವೇ ಮಹಿಳಾ ಜ್ಞಾನವಿಕಾಸ ಕೇಂದ್ರಗಳು. ಈ ಮುಖೇನ ಮಹಿಳೆಯರಿಗೆ ಸೂಕ್ತ ಮಾಹಿತಿ, ತರಬೇತಿ ನೀಡಿ ಸ್ವಾಲಂಬಿ ಜೀವನ ನಡೆಸಲು ಪ್ರೇರೇಪಿಸಿ, ನಾಯಕತ್ವ ಗುಣವನ್ನು ಹೊಂದುವಂತೆ ಮಾಡಿ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡುವ ಕೆಲಸವಾಗುತಿದೆ ಎಂದರು. ಈ ಸಂದರ್ಭದಲ್ಲಿ ಜ್ಞಾನವಿಕಾಸ ತಂಡಗಳಿಗೆ ಹೂ ಗುಚ್ಚ ತಯಾರಿ, ರಂಗೋಲಿ, ಜಾನಪದ ನೃತ್ಯ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು, ಬಂಟ್ವಾಳ ಎಸ್ ವಿ ಎಸ್ ಶಾಲಾ ಶಿಕ್ಷಕಿ ಪೂರ್ಣಿಮಾ ಸ್ಪರ್ಧ ತೀರ್ಪುಗಾರರಾಗಿ ಸಹಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಅತ್ಯುತ್ತಮ ಜ್ಞಾನವಿಕಾಸ ಕೇಂದ್ರಗಳನ್ನು ಗುರುತಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಶಿಶು ಅಭಿವೃದ್ಧಿ ಕಲ್ಯಾಣ ಇಲಾಖೆ ವಿಟ್ಲದ ನಿವೃತ ಯೋಜನಾಧಿಕಾರಿ ಸುಧಾ ಜೋಶಿ, ಉಪಸ್ಥಿತರಿದ್ದರು. ಜ್ಞಾನವಿಕಾಸ ಸದಸ್ಯರಾದ ಜಯಲಕ್ಷ್ಮಿ, ಸರೋಜ ಪ್ರಾರ್ಥಿಸಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾದವ ಗೌಡ ಪ್ರಸ್ಥವಿಕದೊಂದಿಗೆ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ಕಮಲಾಕ್ಷಿ ವಂದಿಸಿ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನೀರೂಪಿಸಿದರು. ವಲಯ ಮೇಲ್ವಿಚಾರಕಿಗಳಾದ ಅಶ್ವಿನಿ, ರೂಪ, ತಾಲೂಕು ಕೃಷಿ ಅಧಿಕಾರಿ ಜನಾರ್ಧನ್, ಆಂತರಿಕ ಲೆಕ್ಕ ಪರಿಶೋಧಕ ರಾಜೇಶ್ ಸಹಕರಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...