Monday, January 26, 2026

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಸಂತ ಸಮ್ಮೇಳನ

ಉಜಿರೆ: ಸಕಲ ಪಾಪಕರ್ಮಗಳ ಕ್ಷಯ ಮಾಡಿ ಮೋಕ್ಷ ಪ್ರಾಪ್ತಿಯೇ ಸಕಲ ಜೀವಿಗಳ ಗುರಿಯಾಗಿದೆ. ಆತ್ಮ ವೈಭವವೇ ಶ್ರೇಷ್ಠ ವೈಭವ ಎಂದು ಆಚಾರ್ಯ ಶ್ರೀ 108 ವರ್ಧಮಾನ ಸಾಗರ ಮುನಿಮಹಾರಾಜರು ಹೇಳಿದರು.
ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಸಂದರ್ಭದಲ್ಲಿ ಶುಕ್ರವಾರ ಆಯೋಜಿಸಿದ ಸಂತ ಸಮ್ಮೇಳನದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು.
ಲೌಕಿಕ ಸುಖ-ಭೋಗಗಳಿಂದ ಶಾಂತಿ, ನೆಮ್ಮದಿ ಸಿಗುವುದಿಲ್ಲ. ಅಹಿಂಸೆ, ತ್ಯಾಗ, ಮೈತ್ರಿ, ಮತ್ತು ಧ್ಯಾನದಿಂದ ಶಾಶ್ವತ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಬಾಹುಬಲಿಯ ಜೀವನದಿಂದ ನಮಗೆ ಉತ್ತಮ ಸಂದೇಶ ದೊರಕುತ್ತದೆ. ಆತ್ಮ ವೈಭವವೇ ಶ್ರೇಷ್ಠ ವೈಭವ ಹಾಗೂ ಶಾಶ್ವತ, ಬಾಕಿ ಎಲ್ಲಾ ನಶ್ವರ ಎಂದು ಅವರು ಹೇಳಿದರು.
ಆಚಾರ್ಯ ಪುಷ್ಪದಂತ ಸಾಗರ ಮುನಿಮಹಾರಾಜರು ಮಾತನಾಡಿ, ಪ್ರಕೃತಿ-ಪರಿಸರವನ್ನು ನಾವು ಪ್ರೀತಿಸಬೇಕು. ಪರಸ್ಪರ ಪ್ರೀತಿ-ವಿಶ್ವಾಸ, ಗೌರವದಿಂದ ಸಂತಸ, ನೆಮ್ಮದಿಯ ಜೀವನ ಸಾಧ್ಯ. ನಾವು ಸುಸಂಸ್ಕೃತರಾಗಿ ಸಾರ್ಥಕ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಒಬ್ಬಆದರ್ಶ ವ್ಯಕ್ತಿ. ಎಲ್ಲರಿಗೂ ಮಾರ್ಗದರ್ಶಕರು ಎಂದು ಹೇಳಿದರು.
ಹೊಂಬುಜಜೈನ ಮಠದದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಬಾಹುಬಲಿ ವೈಭವದಿಂದ ನಮ್ಮಆಧ್ಯಾತ್ಮಿಕ ವೈಭವದ ಜಾಗೃತಿಯಾಗುತ್ತದೆ. ಅಧಿಕಾರ ಪ್ರಾಪ್ತಿಗಾಗಿ ವಿವೇಕವನ್ನು, ಮಾನವೀಯತೆಯನ್ನು ಕಳೆದುಕೊಳ್ಳಬಾರದು ಎಂದು ಬಾಹುಬಲಿಯಜೀವನದಿಂದ ನಮಗೆ ಸಂದೇಶದೊರಕುತ್ತದೆ. ಶಸ್ತ್ರಾಸ್ತ್ರ ರಹಿತವಾಗಿಯುದ್ಧ ಮಾಡಬಹುದೆಂದು ಮೊದಲು ತೋರಿಸಿಕೊಟ್ಟವರು ಭಗವಾನ್ ಬಾಹುಬಲಿ ಎಂದು ಸ್ವಾಮೀಜಿ ಹೇಳಿದರು.
ಒಡಿಯೂರು ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಸಂತರಿಗೂ ಸಮಾಜಕ್ಕೂ ಅವಿನಾಭಾವ ಸಂಬಂಧವಿದ್ದು ಸಂತರಿಂದ ಸಮಾಜದ ಶುದ್ಧೀಕರಣ ಸಾಧ್ಯಎಂದು ಹೇಳಿದರು.
ಮಡಿಕೇರಿಯ ಶಾಂತಾಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಆಸೆಯೇದುಃಖಕ್ಕೆ ಮೂಲವಾಗಿದೆತ್ಯಾಗ ಮತ್ತು ಮನೋನಿಗ್ರಹದಿಂದ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಹೇಳಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಜೈನಧರ್ಮದಉದಾತ್ತ ತತ್ವಗಳಾದ ತ್ಯಾಗ, ಅಹಿಂಸೆಯಂದ ಶಾಂತಿಯುತಜೀವನ ನಡೆಸಬಹುದುಎಂದು ಹೇಳಿದರು.
ಕನ್ಯಾಡಿರಾಮಕ್ಷೇತ್ರದ ಬ್ರಹ್ಮಾನಂದ ಸ್ವಾಮೀಜಿ ಮಾತನಾಡಿ, ಅಂತರಂಗ ಪರಿಶುದ್ಧವಾಗಿದ್ದಾಗ ಜೀವನ ಪಾವನವಾಗುತ್ತದೆ. ನಿರಂತರ ಅಭ್ಯಾಸದಿಂದ ಬುದ್ಧಿ ಮನಸ್ಸನ್ನುಗೆದ್ದರೆಉನ್ನತ ಸಾಧನೆ ಮಾಡಬಹುದು ಎಂದು ಹೇಳಿದರು.
ಸಚಿವಎಚ್.ಡಿ.ರೇವಣ್ಣ ಮಾತನಾಡಿ, ಧರ್ಮಸ್ಥಳದಲ್ಲಿ ರಸ್ತೆ ಅಭಿವೃದ್ಧಿಗಾಗಿ ಈಗಾಗಲೇ 23 ಕೋಟಿ ರೂ.ಮಂಜೂರು ಮಾಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಹೈಮಾಸ್ಟ್ ವಿದ್ಯುದ್ದೀಪ ಅಳವಡಿಕೆಗಾಗಿ ಎರಡುಕೋಟಿ ರೂ. ಮಂಜೂರು ಮಾಡಿದ್ದು ಕೆಲಸ ಈಗಾಗಲೇ ಪ್ರಾರಂಭಿಸಲಾಗಿದೆ ಎಂದರು.
ಭಕ್ತಾದಿಗಳ ಅನುಕೂಲಕ್ಕಾಗಿ ಧರ್ಮಸ್ಥಳವನ್ನು ಸಂಪರ್ಕಿಸುವಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ.
ಹೆಗ್ಗಡೆಯವರ ಸಲಹೆಯಂತೆ ಸರ್ಕಾರದ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ನೂರು ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.
ಚೆನ್ನಮ್ಮದೇವೇಗೌಡ ಬೆಳ್ಳಿ ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು
ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಅಧ್ಯಕ್ಷತೆ ವಹಿಸಿದರು. ಸಂತೋಷ್‌ ಗುರೂಜಿ ಶುಭಾಶಂಸನೆ ಮಾಡಿದರು.
ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಗತಿಸಿದರು. ಮೂಡಬಿದ್ರೆಯ ಕೃಷ್ಣರಾಜ ಹೆಗ್ಡೆ ಧನ್ಯವಾದವಿತ್ತರು. ಬಾರ್ಕೂರು ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...