Thursday, February 13, 2025

ಖಾಸಗಿ ಆಸ್ಪತ್ರೆಗಳ ಹೊರಗೆ ದರ ಪಟ್ಟಿ ಕಡ್ಡಾಯ-ದಿನೇಶ್ ಗುಂಡೂರಾವ್

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯವಾಗಿದ್ದು, ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಅನೇಕ ದೂರುಗಳು ಸಲ್ಲಿಕೆಯಾದ ಬೆನ್ನಲ್ಲೇ ಆರೋಗ್ಯ ಸಚಿವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದರೂ ಸಾವಿರಾರು ರೂಪಾಯಿ ಬಿಲ್ ವಸೂಲಿ ಮಾಡಲಾಗುತ್ತಿದೆ ಎಂದು ದೂರಿರುವ ಸಾರ್ವಜನಿಕರು ಆರೋಗ್ಯ ಸಚಿವರು ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ದೂರು ನೀಡಿದ್ದರು. ನೂರಾರು ದೂರುಗಳು ಸಚಿವರಿಗೆ ಬಂದಿದ್ದವು. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...