ಬಂಟ್ವಾಳ: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ 2019-20 ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಒಟ್ಟಾರೆ ಶೇಕಡಾ 35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಇಲಾಖೆಯ www.dte.kar.nic.in ವೆಬ್‍ಸೈಟ್‍ನ ಮೂಲಕ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು, ಡಿಪ್ಲೋಮಾ ಅರ್ಜಿ ನೋಂದಣಿ ಶುಲ್ಕವನ್ನು ನಗದು ರೂಪದಲ್ಲಿ ಮೇ:18 ರ ಸಂಜೆ 5.30 ಗಂಟೆಯೊಳಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿಮಾಡಿ ಬಂಟ್ವಾಳ ಸರ್ಕಾರಿ ಪಾಲಿಟೆಕ್ನಿಕ್,ಗೆ ಅನ್‍ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಂಶುಪಾಲರನ್ನು ಮುಖತಾ ಅಥವಾ ಮೊಬೈಲ್ ಸಂಖ್ಯೆ : 8762328660 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

