Tuesday, February 3, 2026

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಾದ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಶ್ರೀ ಮಂಜುನಾಥಸ್ವಾಮಿಯು ಅನುಗ್ರಹ ಪಡೆದು ಚುನಾವಣಾ ಯುದ್ದಕ್ಕೆ ಹೊರಟಿದ್ದೇವೆ. ನನಗೆ ಸದಾ ರಕ್ಷಣೆ ನೀಡುವವರು ಶ್ರೀ ಮಂಜುನಾಥ, ಶಿವ. ಹಾಗಾಗಿ ಕ್ಷೇತ್ರಕ್ಕೆ ಬಂದು ದರ್ಶನ ಪಡೆದು ಪೂಜೆ ಸಲ್ಲಿಸಿ ಚುನಾವಣಾ ಕಾರ್ಯಕ್ಕೆ ಇಳಿದಿದ್ದೇನೆ. ಜನ ಆಶೀರ್ವಾದ ಮಾಡುವ ನಂಬಿಕೆಯಿದೆ ಎಂದರು.

ನಾವು ನುಡಿದಂತೆ ನಡೆದಿದ್ದೇವೆ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಮಾತುಬಿಡ ಮಂಜುನಾಥ ನುಡಿದಂತೆ ನಡೆಯಲು ನಮಗೆ ಶಕ್ತಿ ನೀಡಿದ್ದಾನೆ. ಅದೇ ದೊಡ್ಡ ಆಶೀರ್ವಾದವಾಗಿದೆ. ಜನರು ನೀಡಿದ ಅವಕಾಶದ ಸದುಪಯೋಗ ಪಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿ‌ಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಿಥುನ್ ರೈ, ರಂಜನ್. ಜಿ ಗೌಡ, ನಾಗೇಶ್ ಕುಮಾರ್, ಅಭಿನಂದನ್ ಹರೀಶ್, ಭರತ್, ಅಭಿದೇವ್ ಉಪಸ್ಥಿತರಿದ್ದರು.

More from the blog

ಮತ್ತೆ ಚಿನ್ನದ ಬೆಲೆ ಕುಸಿತ ! ಇಂದಿನ ದರ ಎಷ್ಟಿದೆ ಗೊತ್ತಾ?

ಮಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈಗ ಸತತವಾಗಿ ಇಳಿಕೆ ಕಾಣುತ್ತಿವೆ. ಫೆಬ್ರವರಿ 3 2026, ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್‌ನ ಚಿನ್ನದ ಬೆಲೆಯು...

ರಾಜ್ಯದ ರೈಲ್ವೆ ಯೋಜನೆಗಳಿಗೆ 7748 ಕೋಟಿ ರೂ. ಅನುದಾನ : ಸಚಿವ ವಿ.ಸೋಮಣ್ಣ

ಬೆಂಗಳೂರು : ರಾಜ್ಯದ ರೈಲ್ವೆ ಯೋಜನೆಗಳಿಗೆ ಬಜೆಟ್‌ನಲ್ಲಿ 7748 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, 2009ರಿಂದ...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...