Wednesday, February 12, 2025

ಆನ್‌ಲೈನ್ ಮೂಲಕ ಮರಳು ಬುಕ್ಕಿಂಗ್ ಸ್ಥಗಿತ!

ಬಂಟ್ವಾಳ: “ಡಿ.ಕೆ. ಸ್ಯಾಂಡ್ ಬಝಾರ್”ನಿಂದ ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ಕಡಿಮೆ ದರಲ್ಲಿ ವಿತರಣೆಯಾಗುತ್ತಿದ್ದ ಮರಳು ಬುಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇತ್ರಾವತಿ ನದಿಯಲ್ಲಿ ನೀರಿನ ಒಳಹರಿವು ಹಾಗೂ ಪ್ರತಿಕೂಲ ಹವಾಮಾನದಿಂದ ಮರಳು ಬುಕ್ಕಿಂಗ್ ಹಾಗೂ ಮರಳು ವಿತರಣಾ ಕಾರ್ಯವನ್ನು ನಿಲ್ಲಿಸಲಾಗಿದೆ.


ಕಳೆದ ಮೂರ್ನಾಲ್ಕು ದಿನಗಳಿಂದ ಆನ್‌ಲೈನ್‌ನಲ್ಲಿ ಮರಳು ಬುಕ್ಕಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರತಿಕೂಲ ಹವಾಮಾನದಿಂದ ಮುಂದಿನ ಪ್ರಕಟನೆಯವರೆಗೆ ಮರಳು ಬುಕ್ಕಿಂಗ್ ಅನ್ನು ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಸ್ವೀಕರಿಸಿರುವ ಬುಕ್ಕಿಂಗ್‌ಗಳನ್ನು ಆದ್ಯತೆಯ ಮೇರೆಗೆ ಸರಬರಾಜು ಮಾಡಲಾಗುವುದು. ಅದೇ ರೀತಿ ಮನೆಕಟ್ಟುವವರು ಆಯಾ ಗ್ರಾಮ ಪಂಚಾಯತ್‌ನ ಅನುಮತಿ ಪತ್ರ, ಆರ್‌ಟಿಸಿ, ಅಗತ್ಯ ಬೇಕಾಗಿರುವ ಮರಳಿನ ಅಂದಾಜು ಹಾಗೂ ಮನೆ ಅಥವಾ ಜಾಗದ ಭಾವಚಿತ್ರದೊಂದಿಗೆ ದಾಖಲೆಗಳನ್ನು ಸಲ್ಲಿಸಬೇಕು. ಅದಲ್ಲದೆ, ಸಾಲೆತ್ತೂರು ಗ್ರಾಮದ ಬುಕ್ಕಿಂಗ್ ಅನ್ನು ತಡೆಹಿಡಿಯಲಾಗಿದೆ… ಹೀಗೆಂದು ದ.ಕ. ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ವೆಬ್‌ಸೈಟ್ ಪ್ರಕಟನೆ ತಿಳಿಸಿದೆ.

ಡ್ರೆಜ್ಜಿಂಗ್ ಆಗುತ್ತಿಲ್ಲ:
ಡ್ರೆಜ್ಜಿಂಗ್ ಯಂತ್ರದ ಮೂಲಕ ಪಂಪ್ ಆದ ಹೂಳನ್ನು ಕಾಂಕ್ರೀಟಿಕೃತ ಹೊಂಡದಲ್ಲಿ ಸಂಗ್ರಹಿಸಿ ಅಲ್ಲಿಂದ ಹಿಟಾಚಿಗಳ ಮೂಲಕ ಲಾರಿಗಳಿಗೆ ತುಂಬಿ ಯಾರ್ಡ್‌ಗೆ ಸಾಗಿಸಲಾಗುತ್ತಿದೆ. ಆದರೆ, ನೇತ್ರಾವತಿ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಾದ ಕಾರಣ ಡ್ರೆಜ್ಜಿಂಗ್ ಕಾರ್ಯಕ್ಕೆ ಅಡಚಣೆ ಉಂಟಾಗುತ್ತಿದೆ. ಈ ಸಂದರ್ಭದಲ್ಲಿ ಡ್ರೆಜ್ಜಿಂಗ್ ಮಾಡಿದರೂ ಪೈಪ್‌ನಲ್ಲಿ ನೀರು ಮಾತ್ರ ಬರುತ್ತವೆ ಎಂದು ಮರಳು ಸಂಗ್ರಹಗಾರ ಸಿಬ್ಬಂದಿಯೊಬ್ಬರು ಮಾಹಿತಿ ನೀಡುತ್ತಾರೆ.

ಭಾರೀ ಬೇಡಿಕೆ:
ದಿನದಿಂದ ದಿನಕ್ಕೆ ಮರಳಿಗಾಗಿ ಬೇಡಿಕೆ ಹೆಚ್ಚಾಗ ತೊಡಗಿದೆ. ಈ ಮೊದಲು ಆನ್‌ಲೈನ್ ಮೂಲಕ ಕಾಯ್ದಿರಿಸಿದ ಎಲ್ಲರಿಗೂ ಮರಳು ಪೂರೈಕೆ ಮಾಡಲಾಗುತ್ತಿತ್ತು. ಇದರಿಂದ ದಿನಾಲೂ ನೂರಾರು ಟಿಪ್ಪರ್, ಲಾರಿಗಳು ಈ ಪರಿಸರದಲ್ಲಿ ಓಡಾಟ ನಡೆಸುತ್ತಿದ್ದವು. ಮರಳಿನ ಬೇಡಿಕೆ ಹೆಚ್ಚಾದರಿಂದ ಯಾರ್ಡ್‌ನಲ್ಲಿ ಮರಳಿನ ಕೊರತೆ ಉಂಟಾದ ಬಳಿಕ ದಿನಕ್ಕೆ ೧೦೦ ಬುಕ್ಕಿಂಗ್‌ಗಳಿಗೆ ಮಾತ್ರ ಮರಳು ಪೂರೈಕೆ ಮಾಡಲಾಗುತ್ತಿದ್ದವು. ಇದೀಗ ಮತ್ತಷ್ಟು ಬೇಡಿಕೆ ಹಿನ್ನೆಲೆಯಲ್ಲಿ ದಿನಕ್ಕೆ ಒಂದು ಮೊಬೈಲ್ ನಂಬರಿಗೆ ಒಂದೇ ಲೋಡ್ ಮರಳು ನೀಡುವ ವ್ಯವಸ್ಥೆ ಮಾಡಲಾಗಿದೆ.

ಅಕ್ರಮ ಮರಳುಗಾರಿಕೆಯಿಂದಾಗಿ ಜಿಲ್ಲೆಯಲ್ಲಿ ಅಶಾಂತಿಯ ವಾತಾರವರಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಹಣ ಪೂರೈಕೆಯಾಗುತ್ತಿದೆ. ಇದೆನ್ನೆಲ್ಲ ತಡೆಗಟ್ಟುವಲ್ಲಿ ಜಿಲ್ಲಾಧಿಕಾರಿ ಅವರ ಈ ಹೊಸ ಯೋಜನೆಯು ಯಶಸ್ವಿಯಾಗಿದ್ದು, ಈ ಕಾರ್ಯ ಶ್ಲಾಘನೀಯ. ಇದೇ ರೀತಿಯಲ್ಲಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮರಳು ಧಕ್ಕೆ ನಿರ್ಮಿಸುವ ಮೂಲಕ ಮಾಜಿ ಸಚಿವರು, ಶಾಸಕರು ರಾಜಕೀಯ ರಹಿತವಾಗಿ ಬಡ ಕಾರ್ಮಿಕರಿಗೆ ಅನುಕೂಲವಾಗುವಂತೆ ಮರಳು ನೀತಿ ವ್ಯವಸ್ಥೆಗೆ ಸಂಪೂರ್ಣ ಬೆಂಬಲ ನೀಡಬೇಕಾಗಿದೆ.
-ಬೊಂಡಾಲ ಚಿತ್ತರಂಜನ್ ಶೆಟ್ಟಿ,
ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ (ಇಂಟೆಕ್)

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...