ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ರವರು ಭೇಟಿ ನೀಡಿದರು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಸ್ವಾಗತಿಸಿದರು ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಎಐಸಿಸಿ ಕಾರ್ಯದರ್ಶಿಗಳಾದ ಪಿ ವಿ ಮೋಹನ್, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ಪುರಸಭಾ ಉಪಾಧ್ಯಕ್ಷರಾದ ಶ್ರೀಮತಿ ಜೇಸಿಂತ ಡಿ’ಸೋಜ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ರೈ,ಪುರಸಭಾ ಸದಸ್ಯರಾದ ಸದಾಶಿವ ಬಂಗೇರ,ಸುಧರ್ಶನ್ ಜೈನ್ ಪದ್ಮನಾಭ ರೈ,ಹಸೈನೆರ್,ಜನಾರ್ಧನ್ ಚೆಂಡ್ತೀಮರ,ಗಂಗಾಧರ್, ಶ್ರೀಮತಿ ಗಾಯತ್ರಿ ಪ್ರಮುಖರಾದ ಶ್ರೀಮತಿ ಐಡಾ ಸುರೇಶ್, ಶ್ರೀಮತಿ ಮಲ್ಲಿಕಾ ಪಕಳ,ಹರ್ಷದ್ ಸರವು, ಮಧುಸೂದನ್ ಶೆಣೈ,ಸಿದ್ದಿಕ್ ಸೇರಾವ್,ರೋಶನ್ ರೈ, ಉಮೇಶ್ ನೈಲಾ, ಚಂದ್ರಶೇಖರ್ ಪೂಜಾರಿ, ಇಬ್ರಾಹಿಂ ಮಂಚಿ, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

