Wednesday, February 12, 2025

ಶ್ವಾನ ಪ್ರಿಯರೇ ಗಮನಿಸಿ.. ಇನ್ಮುಂದೆ ಪಿಟ್​ಬುಲ್​, ರೊಟ್‌ವೀಲರ್​ ಸೇರಿ 23 ತಳಿಗಳನ್ನು ಸಾಕಂಗಿಲ್ಲ

ದೇಶದಾದ್ಯಂತ ಆಕ್ರಮಣಕಾರಿ ಶ್ವಾನ ದಾಳಿಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಪ್ರಕರಣಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 23 ನಾಯಿ ತಳಿಯನ್ನು ನಿಷೇಧಿಸಿದೆ.

ಹಾಗಾಗಿ ಪಟ್ಟಿ ಮಾಡಿರುವ 23 ಶ್ವಾನಗಳ ಆಮದು, ಮಾರಾಟ, ಸಂತಾನೋತ್ಪತ್ತಿ ಮೇಲೂ ನಿಷೇಧ ಹೇರಿದೆ.

ದೆಹಲಿ ಹೈಕೋರ್ಟ್​ ಆದೇಶಕ್ಕೆ ಸರಿಯಾಗಿ ಪ್ರಾಣಿ ಕಲ್ಯಾಣ ಸಂಸ್ಥೆಗಳ ಜಂಟಿ ಸಮಿತಿಯ ವರದಿಯನ್ನು ಅನುಸರಿಸಿ ಈ ನಿರ್ಣಯ ಕೈಗೊಂಡಿದೆ. ಇದರ ಜೊತೆಗೆ ಪಶುಸಂಗೋಪನೆ ಅಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಅಪಾಯಕಾರಿ ನಾಯಿಗಳ ಆಮದನ್ನು ನಿಷೇಧಿಸಲು ಶಿಫಾರಸು ಮಾಡಿದೆ.

ನಿಷೇಧಿದ ಶ್ವಾನದ ತಳಿಗಳು

ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್, ಕಕೇಶಿಯನ್ ಶೆಫರ್ಡ್ ಡಾಗ್, ಸೌತ್ ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಟೊಸಪ್ಲಾನಿನಾಕ್, ಮಾಸ್ಟಿಫ್ಸ್, ರೊಟ್‌ವೀಲರ್, ಟೆರಿಯರ್‌ಗಳು, ರೊಡೇಸಿಯನ್ ರಿಡ್ಜ್‌ಬ್ಯಾಕ್, ವುಲ್ಫ್ ಡಾಗ್ಸ್, ಕೆನಾರಿಯೊ, ಅಕ್ಬಾಶ್ ಡಾಗ್, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...