Saturday, January 31, 2026

ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜು: ಡಾ.ಬಿ.ಆರ್ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ನಸೀಮಾ ಬೇಗಂ ಎಸ್. ಪ್ರಸ್ತಾವಿಸಿ, ಸಂವಿಧಾನದ ಮಹತ್ವ ವಿವರಿಸಿ ಅಂಬೇಡ್ಕರ್ ಜೀವನದ ಮಾಹಿತಿ, ಸಮಾನತೆಯ ಆಧಾರದಲ್ಲಿ ಸಮಾಜ ಕಟ್ಟುವ ಉದ್ದೇಶದಿಂದ ಸಂವಿಧಾನದಲ್ಲಿ ಹಲವಾರು ಅವಕಾಶಗಳನ್ನು ಸೃಷ್ಟಿಸಿ ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಪುಷ್ಟಿ ನೀಡಿದರ ಬಗೆಯನ್ನು ವಿವರಿಸಿ ಸಂವಿಧಾನದ ಶಿಲ್ಪಿಗಳ ಉದ್ದೇಶವನ್ನು ಈಡೇರಿಸುವಂತೆ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲಲೆ ಸೌಮ್ಯ ಹೆಚ್.ಕೆ. ಇವರು ಸಂವಿಧಾನದ ಮಹತ್ವವನ್ನು ವಿವರಿಸಿ, ಉತ್ತಮ ಆಶಯಗಳನ್ನೊಳಗೊಂಡ ದೀರ್ಘವಾದ ಸಂವಿಧಾನವಾಗಿದ್ದು, ಅದರಲ್ಲಿ ಭಾರತದ ಸಮಸ್ಯೆಗಳಿಗೆ ಪರಿಹಾರವೂ ಅಡಗಿದೆ. ನಮಗೆ ಬೇಕೆನಿಸಿದಂತೆ ಸಂವಿಧಾನವನ್ನು ತಿರುಚದೆ ಸಂವಿಧಾನ ಶಿಲ್ಪಿಗಳ ಮೂಲ ಉದ್ದೇಶವನ್ನು ಈಡೇರುವಂತೆ ಅವರ ಚಿಂತನೆಗಳಿಗೆ ಮೌಲ್ಯಗಳಿಗೆ ಪ್ರಾಧಾನ್ಯತೆ ನೀಡಿ ಸಂವಿಧಾನವನ್ನು ಉಳಿಸಿ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.
ಕಾರ್ಯಕ್ರಮದಲ್ಲಿ ತೃತೀಯ ಬಿ.ಎ. ವಿದ್ಯಾರ್ಥಿಗಳಾದ ಗಾಯತ್ರಿ ಮತ್ತು ಇಂದ್ರಾವತಿ ಪ್ರಾರ್ಥಿಸಿದರು. ಪೂಜಾ ಸ್ವಾಗತಿಸಿ,ಅಶ್ವಿತ ವಂದಿಸಿದರು. ಶಮೀಮ ಕಾರ್ಯಕ್ರಮ ನಿರೂಪಿಸಿದರು.

 

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...