ಉಜಿರೆ: ಎಲ್ಲಾ ಸಿಬ್ಬಂದಿಗಳು ತಂಡವಾಗಿ ಹಾಗೂ ಕಠಿಣ ಪರಿಶ್ರಮದಿಂದ ದುಡಿದಲ್ಲಿ ಸಂಸ್ಥೆಯ ಬೆಳವಣಿಗೆ ಸುಲಭ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳಾ ಸಬಲೀಕರಣದ ಉದ್ದೇಶವನ್ನುಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಸಿರಿ ಸಂಸ್ಥೆಗೆ ಎಲ್ಲಾ ಸಿಬ್ಬಂದಿಗಳು ಪ್ರಾಮಾಣಿಕವಾಗಿ, ಬದ್ದತೆಯಿಂದ ತನ್ನನ್ನು ತಾನು ತೊಡಗಿಸಿಕೊಳ್ಳಬೇಕೆಂದು ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ನುಡಿದರು.
ಸಿರಿ ಕೇಂದ್ರ ಕಚೇರಿಗೆ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆಗಳನ್ನು ಪರಿಶೀಲಿಸಿ ಸಿಬ್ಬಂದಿಗಳ ಸಭೆಯಲ್ಲಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರನ್ನು ಎಲ್ಲಾ ಸಿಬ್ಬಂದಿಗಳು ಹಾಗೂ ಘಟಕ ಸದಸ್ಯರ ಪರವಾಗಿ ಸನ್ಮಾನಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಸಂಸ್ಥೆಯು ನಡೆದು ಬಂದದಾರಿಯ ಬಗ್ಗೆ ವಿವರವಾಗಿ ತಿಳಿಸಿದರು. ಸಂಸ್ಥೆಯ ಯೋಜನಾಧಿಕಾರಿ ರೋಹಿತ್ ವಂದಿಸಿದರು.














