Saturday, January 31, 2026

ಸ್ವ-ಉದ್ಯೋಗದಿಂದ ಮಹಿಳಾ ಸಬಲೀಕರಣ- ಡಾ. ಡಿ. ವೀರೇಂದ್ರ ಹೆಗ್ಗಡೆ

ಉಜಿರೆ: ಉತ್ತಮ ಗುಣಮಟ್ಟದ ಶಿಕ್ಷಣ ನೌಕರಿ ಹಾಗೂ ಸ್ವ-ಉದ್ಯೋಗದೊಂದಿಗೆ ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ವಿಶೇಷವಾಗಿ ಸ್ವ-ಉದ್ಯೋಗ ತರಬೇತಿಯಿಂದಾಗಿ ಮಹಿಳಾ ಸಬಲೀಕರಣವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರು ಹೇಳಿದರು.

ಅವರು ಶುಕ್ರವಾರ ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಕೇಶ ವಿನ್ಯಾಸ ಹಾಗೂ ವಸ್ತ್ರ ವಿನ್ಯಾಸದ ಬಗ್ಗೆ ಇಂದು ಎಲ್ಲಾ ಕಡೆಗಳಿಂದಲೂ ಸಾಕಷ್ಟು ಉಪಯುಕ್ತ ಮಾಹಿತಿಗಳು ದೊರಕುತ್ತವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇಶ ವಿನ್ಯಾಸ ಹಾಗೂ ವಧುವಿನ ಅಲಂಕಾರದಲ್ಲಿ ಸೃಜನಾತ್ಮಕತೆ ಇರಬೇಕು.ಯುವತಿಯರನ್ನು ಸೆಕ್ಸಿ ಯಾಗಿ ಅಲಂಕರಿಸಬಾರದು, ಲಕ್ಷ್ಮಿಯಾಗಿ ಅಲಂಕರಿಸಬೇಕು ಎಂದು ಹೆಗ್ಗಡೆಯವರು ಕಿವಿಮಾತು ಹೇಳಿದರು. ಶ್ರದ್ಧೆಯಿಂದ, ಪ್ರಾಮಾಣಿಕವಾಗಿ, ವಿನೀತರಾಗಿ ಗ್ರಾಹಕರಿಗೆ ಉತ್ತಮ ಸೇವೆ ನೀಡಿ ಸರಳ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಮೂಲತಃ ಕಾರ್ಕಳದ ನಿವಾಸಿಯಾಗಿದ್ದು, ಪ್ರಸ್ತುತ ಮುಂಬಯಿನಲ್ಲಿ ಖ್ಯಾತ ಕೇಶ ವಿನ್ಯಾಸ ತಜ್ಞ ಶಿವರಾಂ ಕೆ.ಭಂಡಾರಿ ಮಾತನಾಡಿ, ಹಸಿವಿನ ದಾಹವಿದ್ದಾಗ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು. ನಾವು ಯಾವುದೇ ಪ್ರತಿಪಲಾಪೇಕ್ಷೆ ಇಲ್ಲದೆ ಧನಾತ್ಮಕ ಚಿಂತನೆಯಿಂದ ನಮ್ಮ ಕರ್ತವ್ಯವನ್ನು ಮಾಡಿ ಇತರರ ಸೇವೆ ಮಾಡಬೇಕು ಎಂದು ಹೇಳಿದರು.

ಶಿಬಿರಾರ್ಥಿಗಳ ಪರವಾಗಿ ಬೆಂಗಳೂರಿನ ಸುಷ್ಮಾ ಶಿವಕುಮಾರ್ ಮತ್ತು ಅಮೀರ್‌ ಜಾನ್‌ ಎಂ.ಜೆ. ತಮ್ಮಅನುಭವವನ್ನು ವಿವರಿಸಿದರು.

ಆರ್‌ಸೆಟಿಗಳ ರಾಷ್ಟ್ರೀಯ ನಿರ್ದೇಶಕ ಪಿ.ಸಂತೋಷ್ ಮತ್ತು ಅಪರ್ಣಾ ಪಾಠಕ್ ಉಪಸ್ಥಿತರಿದ್ದರು.

ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ, ನಿರ್ದೇಶಕ ಎಮ್.ಜನಾರ್ದನ್ ಸ್ವಾಗತಿಸಿ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಸಿ.ವಿನಯಕುಮಾರ್‌ ವಂದಿಸಿದರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು.

ನಾಲ್ಕು ದಿನ ನಡೆದ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ 29 ಮಂದಿ ಸೇರಿದಂತೆ ಒಟ್ಟು 54 ಮಂದಿ ಭಾಗವಹಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...