Friday, January 30, 2026

‘ನಾವೇ ಸೂಪರ್ ಹೀರೋಗಳು’ ಎಂದು ಮೆರೆಯಬೇಡಿರಿ. ಕಣ್ಣೀರಿಟ್ಟ ವೈದ್ಯೆ

ಮುಂಬೈ: ಒಂದು ವೇಳೆ ನೀವು ಕೊರೋನ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದರೆ, ಇಲ್ಲವೇ ನಿಮಗೆ ಇನ್ನೂ ಕೊರೋನ ಸೋಂಕು ಪಾಸಿಟಿವ್ ಆಗಿಲ್ಲ ಎಂದರೆ ‘ನಾವೇ ಸೂಪರ್ ಹೀರೋಗಳು’ ಎಂದು ಮೆರೆಯಬೇಡಿರಿ. ಕೊರೋನದಿಂದ ನಮಗೆ ಸ್ವಲ್ಪ ವಿನಾಯಿತಿ ಇದೆ ಎಂದೂ ಭಾವಿಸಬೇಡಿ. ಅನೇಕ ಯುವ ಜನರು ಕೊರೋನ ಸೋಂಕಿಗೆ ಒಳಗಾಗುತ್ತಿರುವುದನ್ನು, ಅದರಿಂದ ಪ್ರಾಣ ಬಿಟ್ಟಿದ್ದನ್ನು ನಾವು ನೋಡುತ್ತಿದ್ದೇವೆ. ಅವರಿಗೆ ಸಹಾಯ ಮಾಡಲು ಸಾಧ್ಯವಿಲ್ಲದೆ ನಾವು ಅಸಹಾಯಕರಾಗಿದ್ದೇವೆ.

ಇದು ಮುಂಬೈನಲ್ಲಿ ಕೊರೋನ ರೋಗಿಗಳಿಗೆ ನಿರಂತರ ಚಿಕಿತ್ಸೆ ನೀಡುತ್ತಿರುವ ಓರ್ವ ಯುವ ಮಹಿಳಾ ವೈದ್ಯೆ ಡಾ. ತೃಪ್ತಿ ಗಿಲಾಡಾ ಕಣ್ಣೀರಿನ ಮಾತುಗಳು. ಅವರು ಅಸಹಾಯಕತೆಯನ್ನು ಹೇಳಿ ಮಾಡಿರುವ 5 ನಿಮಿಷದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಲ್ಲದೆ ಈ ವೀಡಿಯೋ ಕೊರೋನದಿಂದ ದೇಶದ ಚಿತ್ರಣವನ್ನು ತೆರೆದಿಡುತ್ತಿದೆ.

ಕೊರೋನ ಸೋಂಕಿತರ ಸಂಖ್ಯೆ ಎಷ್ಟು ಹೆಚ್ಚಾಗುತ್ತಿದೆ ಎಂದರೆ, ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ, ಆಕ್ಸಿಜನ್ ಸಿಗದೇ, ಔಷಧ, ಲಸಿಕೆ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ವೈದ್ಯಲೋಕಕ್ಕೆ ಏನೂ ಸಹಾಯ ಮಾಡಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯನ್ನ ಈ ಹಿಂದೆ ಎಲ್ಲೂ ಕಂಡಿರಲಿಲ್ಲ. ಏನು ಮಾಡಬೇಕೆಂದು ನನಗೆ ತಿಳಿಯುತ್ತಿಲ್ಲ. ನನ್ನ ಹೃದಯ ಮುರಿದಿದೆ. ದಯವಿಟ್ಟು ಮನೆಯಿಂದ ಹೊರ ಹೋಗುವಾಗ ಮಾಸ್ಕ್ ಧರಿಸಿ. ದಯವಿಟ್ಟು ಸುರಕ್ಷಿತವಾಗಿರಿ ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...