Monday, February 10, 2025

ಮಾಜಿ ಸಚಿವ ರೈ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಗ್ರಾಮಾಂತರ ಠಾಣೆಯಲ್ಲಿ ದೂರು

ಬಂಟ್ವಾಳ: ತೀವ್ರ ಮಳೆಯಿಂದಾಗಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ದೋಣಿಯಲ್ಲಿ ತೆರಳುವ ಸಮಯದಲ್ಲಿ ಮಾಜಿ ಶಾಸಕ ರಮಾನಾಥ ರೈ ಯವರ ವೀಡಿಯೋ ಚಿತ್ರೀಕರಣ ತಿರುಚಿ ಗಣಪತಿ ದೇವರ ವಿಸರ್ಜನೆಯ ರೂಪದಲ್ಲಿ ವ್ಯಂಗ್ಯವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿಸಿದ ಹಾಗೂ ಹಿಂದೂ ಆರಾಧ್ಯ ದೇವರ ಅಪಹಾಸ್ಯ ಮಾಡಿ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರಿಸಿದ ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಿ ತಕ್ಕ ಶಿಕ್ಷೆ ನೀಡಬೇಕಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದರು. ಈ ಸಂಧರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಬೇಬಿ ಕುಂದರ್‍, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಸುದೀಪ್ ಕುಮಾರ್‍ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಗಂಗಾಧರ್‍ ಪೂಜಾರಿ ಹಾಗೂ ಲೋಲಾಕ್ಷ ಶೆಟ್ಟಿ ಉಪಸ್ಥಿತರಿದ್ದರು.

More from the blog

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...