Saturday, January 31, 2026

ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ!

ಬಂಟ್ವಾಳ: ಗ್ರಾ.ಪಂ.ಚುನಾವಣೆಯನ್ನು ಬಹಿಷ್ಕಾರ ಹಾಕಿ ರಸ್ತೆಯಲ್ಲಿ ಸಜೀಪಮುನ್ನೂರು ಗ್ರಾಮದ ಗ್ರಾಮಸ್ಥರು ಬ್ಯಾನರ್ ಹಾಕಿದ ಪ್ರಸಂಗ ಶನಿವಾರ ನಂದಾವರದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ನಂದಾವರ ದೇವಸ್ಥಾನದ ಸಮೀಪ ಅರಮನೆ ಹಿತ್ಲು ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಬ್ಯಾನರ್ ಒಂದನ್ನು ಹಾಕಿದ್ದಾರೆ.

2020 – 21 ಸಾಲಿನಲ್ಲಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಸಜೀಪ ಮುನ್ನೂರು ಗ್ರಾಮದ ನಂದಾವರ ಅರಮನೆಹಿತ್ಲುವಿನ ಸಾರ್ವಜನಿಕ ರು ಒಗ್ಗಟ್ಟಿನಿಂದ ಬಹಿಷ್ಕರಿಸುತ್ತೇವೆ.
ನಂದಾವರದಿಂದ ಅರಮನೆಹಿತ್ಲುವಿಗೆ ಸಂಪರ್ಕಿಸುವ ರಸ್ತೆಗೆ ಸರಕಾರದಿಂದ ಅನುದಾನ ದೊರೆತರೂ ಸಹ ಸ್ಥಳೀಯ ರಾಜಕಾರಣಿಗಳ ಬೇಜವಾಬ್ದಾರಿಯಿಂದ ಯಾವುದೇ ಕೆಲಸ ನಡೆಯದ ಕಾರಣ ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆ ಯನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.

ವಿಶೇಷ ಸೂಚನೆ

ಯಾವುದೇ ಪಕ್ಷದ ರಾಜಕೀಯ ಪ್ರೇರಿತ ವ್ಯಕ್ತಿಗೆ ಒಳಗೆ ಬರಲು ಅವಕಾಶವಿರುವುದಿಲ್ಲ ಎಂದು ಬರೆಯಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...