Tuesday, January 27, 2026

ನಾಳೆ ‘ಮತದಾನ’ ನಡೆಯಲಿರುವ ಕ್ಷೇತ್ರಗಳ್ಯಾವ್ಯಾವು ಗೊತ್ತಾ.?

ಬಂಟ್ವಾಳ:  ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ನಾಳೆ ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ಸೇರಿದಂತೆ ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಮೈಸೂರು-ಕೊಡಗು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣಾ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆಯೇ ಅಭ್ಯರ್ಥಿಗಳು ಮತ ಬೇಟೆಗಾಗಿ ಈಗ ಮನೆ ಮನೆಗೆ ಭೇಟಿ ನೀಡುತ್ತಿದ್ದು, ನಾಯಕರುಗಳು ಈಗ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಧಾವಿಸಿದ್ದಾರೆ. ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಏಪ್ರಿಲ್ 23 ರ ಮಂಗಳವಾರದಂದು ಮತದಾನ ನಡೆಯಲಿದ್ದು, ಕ್ಷೇತ್ರಗಳ ವಿವರ ಇಂತಿದೆ.
ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 23 ರಂದು ಮತದಾನ ನಡೆಯಲಿದೆ.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...