Saturday, February 8, 2025

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ ಪರಮ ಶಿಷ್ಯ, ಪುದು ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರು ಮತ್ತು ಹಾಲಿ ಸದಸ್ಯರಾದ ಹಾಶೀರ್ ಪೇರಿಮಾರ್ ರವರು 4,667 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಈ ಹುದ್ದೆಗೆ ಜಿಲ್ಲಾ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರದ ಒಟ್ಟು 20 ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಸ್ಪರ್ಧಿಸಿದರು.

ಇಬ್ರಾಹಿಂ ಬಾತಿಷಾ ಆತೂರು 4265 ಮತಗಳನ್ನು ಪಡೆದು ಎರಡನೇ ಸ್ಥಾನ ತಲುಪಿದ್ದಾರೆ. ಇನ್ನು ಮೊಹಮ್ಮದ್ ಉನೈಸ್ 2323 ಮತಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಎಐಸಿಸಿ ಚುನಾವಣೆ ಸಮಿತಿ ಯುವ ಕಾಂಗ್ರೆಸ್‌ನ ಎಲ್ಲ ಹಂತದ ಘಟಕಗಳಿಗೆ ನೋಂದಣಿ ಮಾಡಿಕೊಂಡಿತ್ತು. ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳಿಗೆ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ ಮತದಾನ ನಡೆದಿತ್ತು.

More from the blog

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...

ಬಂಟ್ವಾಳ : ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ: ಪ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ  ನಡೆದಿದೆ. ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ. ರಾಜೇಶ್  ಸಜೀಪ...

ಶ್ರೀ ಒಡಿಯೂರು ರಥೋತ್ಸವ – ಜಾತ್ರೆ ಅಂಗವಾಗಿ ನಡೆಯಿತು ಧರ್ಮಸಭೆ

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದ ಆತ್ರೇಯ ಮಂಟಪದಲ್ಲಿ ಶುಕ್ರವಾರ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಧರ್ಮಸಭೆ ನಡೆಯಿತು. ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳು ಆಶೀರ್ವಚನ ನೀಡಿ,...

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...