ಬಂಟ್ವಾಳ: ಪಂಜಿಕಲ್ಲು ಗ್ರಾ.ಪಂ.ನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ನ. 12ರಂದು ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ದಡ್ಡಲಕಾಡು ಶಾಲೆಯ ಮತಗಟ್ಟೆಯಲ್ಲಿ ಉಪಚುನಾವಣೆ ನಡೆಯಲಿದೆ. ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 952 ಮತದಾರರಿದ್ದು, ಮತಗಟ್ಟೆಯಲ್ಲಿ 5 ಮಂದಿ ಸಿಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ.














