ಬಂಟ್ವಾಳ: ಪ್ರಪಂಚದಲ್ಲಿ ಭಾರತವು ಅತೀದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಮತದಾರಲ್ಲಿ ಜಾಗೃತಿಯ ಕೊರತೆಯಿಂದಾಗಿ ಮತದಾನದ ಮುನ್ನ ಹಲವು ಆಮಿಷಗಳಿಗೆ ಬಲಿಯಾಗಿ ಆತ್ಮ ಗೌರವಕ್ಕೆ ವಿರುದ್ಧವಾಗಿ ಅನರ್ಹ ಅಭ್ಯರ್ಥಿಗಳಿಗೆ ಮತದಾನ ಮಾಡುತ್ತಿರುವುದು ಸಾಮಾನ್ಯವಾಗಿದೆ, ಈ ನಿಟ್ಟಿನಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಂತಹ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ಮತದಾನದ ಬಗ್ಗೆ ಜಾಗೃತಿ ಅಗತ್ಯ ಎಂದು ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರೀಶ್ ಭಟ್ ಹೇಳಿದರು.ಕಾಲೇಜಿನ ರಾಜ್ಯಶಾಸ್ತ್ರ ಸಂಘ ಮತ್ತು ಮತದಾರರ ಸಾಕ್ಷರತಾ ಕ್ಲಬ್‌ಗಳ ಆಶ್ರಯದಲ್ಲಿ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಯಕಾರ್ಯಕ್ರಮದಲ್ಲಿ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ಮತದಾರರ ಸಾಕ್ಷರತಾ ಕ್ಲಬ್‌ಗಳ ಸಂಚಾಲಕ ಪ್ರೊ. ಬಾಲಸುಬ್ರಹ್ಮಣ್ಯ ಪಿ.ಎಸ್ ಬೋಧಿಸಿದರು.
ಅಲ್ಲದೆ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮನೆ ಮನೆ ಭೇಟಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಭಾಷಣ, ಕ್ವಿಜ್ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದು ಸಹಕರಿಸಿದರು.
